Friday, November 22, 2024

ರಾಜ್ಯದ ಕೆಲ ಜಿಲ್ಲೆಯಲ್ಲಿ ಮಳೆ ಸಾಧ್ಯತೆ!

ಬೆಂಗಳೂರು: ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ .

ದಕ್ಷಿಣ ಕನ್ನಡದಲ್ಲೂ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: ಗಂಗಾಜಲ ಮೇಲೆ ಯಾವುದೇ GST ಇಲ್ಲ!

ಧರ್ಮಸ್ಥಳ, ಸಕಲೇಶಪುರ, ಭಾಗಮಂಡಲ,ಶ್ರೀರಂಗಪಟ್ಟಣ, ಕಡೂರು, ಕಳಸ, ಸೋಮವಾರಪೇಟೆ, ಸರಗೂರು,ಕೊಳ್ಳೇಗಾಲ, ಕುಂದಾಪುರ, ಅಜ್ಜಂಪುರ, ಟಿ ನರಸೀಪುರ, ಮಂಡ್ಯದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಬಿಸಿಲಿರಲಿದೆ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

RELATED ARTICLES

Related Articles

TRENDING ARTICLES