ನವದೆಹಲಿ : ಕಾವೇರಿ ಜಲ ವಿವಾದ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಇಂದು ಮತ್ತೆ ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದೆ. CWMAಯು CWRC ಶಿಫಾರಸು ಎತ್ತಿ ಹಿಡಿದಿದೆ.
ದೆಹಲಿಯಲ್ಲಿ ನಡೆದ ಇಂದಿನ ಸಭೆಯಲ್ಲಿ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿನಿತ್ಯ 3,000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಿದೆ.
ಕಳೆದೆರಡು ದಿನಗಳ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಪ್ರತಿನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಶಿಫಾರಸು ನೀಡಿತ್ತು. ಇದೀಗ CWRC ಆದೇಶವನ್ನು CWMA ಎತ್ತಿ ಹಿಡಿದಿದೆ. ಇದರಿಂದ ಕರ್ನಾಟಕಕ್ಕೆ ಸಿಡಿಲು ಬಡಿದಂತಾಗಿದೆ.
ಹೆದ್ದಾರಿ ತಡೆದು ಪ್ರತಿಭಟನೆ
ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ CWMA ಆದೇಶ ಹಿನ್ನೆಲೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಹಾಗೂ ಮೈಸೂರು ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ್ದು, ಹೆದ್ದಾರಿ ತಡೆ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪ್ರತಿಭಟನಾಕಾರರು ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿ ಕಿಡಿಕಾರಿದ್ದಾರೆ.