Saturday, November 23, 2024

2020ರ ಬಜೆಟ್​: ಜನತೆಯ ಸಲಹೆ ಕೇಳಿದ ಮೋದಿ

ನವದೆಹಲಿ: ಮುಂದಿನ ತಿಂಗಳು ಫೆಬ್ರವರಿ 1ರಂದು ಕೇಂದ್ರ ಸರ್ಕಾರದ ಬಜೆಟ್​ ಮಂಡನೆಯಾಗಲಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನತೆಯಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ. ಅಲ್ಲದೆ ಈ ಕುರಿತು ಆರ್ಥಿಕ ಹಾಗೂ ಉದ್ಯಮ ತಜ್ಞರ ಜೊತೆ ಚರ್ಚೆ ನಡೆಸಿದ್ದಾರೆ.

ಕೇಂದ್ರ ಬಜೆಟ್​ 130 ಕೋಟಿ ಭಾರತೀಯರ ಆಸೆ, ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ಇದು ಭಾರತದ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತದೆ. ನಿಮ್ಮಲ್ಲಿರುವ ಆಲೋಚನೆಗಳನ್ನು ಹಂಚಿಕೊಳ್ಳಿ ಎಂದು ನಾನು ನಿಮಗೆಲ್ಲರಿಗೂ ಆಹ್ವಾನ ನೀಡುತ್ತಿದ್ದೇನೆ ಎಂದು ಪ್ರಧಾನಿಯವರು ತಮ್ಮ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಣೆ ಹೊರಡಿಸಿದ್ದಾರೆ. ‘ ಮೈ ಗವ್​ ‘ www.mygovt.in ವೆಬ್​ಸೈಟ್​ನಲ್ಲಿ ನಿಮ್ಮ ಸಲಹೆಗಳನ್ನು ನೀಡಬಹುದಾಗಿದೆ.

RELATED ARTICLES

Related Articles

TRENDING ARTICLES