Friday, September 20, 2024

ದೇವೇಗೌಡರ ಹೇಳಿಕೆ ಸುಳ್ಳು: ಕೇರಳ ಸಿಎಂ

ಕೇರಳ: ಕೇರಳದ ನಾಯಕರು JDS-BJP ಮೈತ್ರಿಗೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ನೀಡಿರುವ ಹೇಳಿಕೆ ಸುಳ್ಳು ಮತ್ತು ಅಸಂಬದ್ಧ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕದ JDS-BJP ಮೈತ್ರಿಗೆ ಕೇರಳದ CPI ನಾಯಕರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು HDD ಹೇಳಿಕೆ ನೀಡಿದ್ದರು ಎನ್ನಲಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪಿಣರಾಯ್‌ ವಿಜಯನ್‌, ಈ ವಿಚಾರ ಸುಳ್ಳು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಳೆಗಾಗಿ ಕತ್ತೆ ಮದುವೆ ಮಾಡಿಸಿದ ಗ್ರಾಮಸ್ಥರು

ಕೇರಳದಲ್ಲಿ ಪಿಣರಾಯಿ ವಿಜಯನ್ ಅವರ CPI ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿರುವ JDS ಇತ್ತೀಚೆಗೆ BJP ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿದೆ. ಈ ನಿರ್ಧಾರವು ರಾಜ್ಯದ ಅನೇಕ JDS ನಾಯಕರಿಗೆ ಇಷ್ಟವಾಗಲಿಲ್ಲ. ಪಕ್ಷದ ಕೇರಳ ಘಟಕವೂ ಸಹ NDA ಸೇರುವ ಕೇಂದ್ರ ನಾಯಕತ್ವದ ನಿರ್ಧಾರವನ್ನು ತಿರಸ್ಕರಿಸಿತು.

ದೇವೇಗೌಡರು ತಮ್ಮ ಪುತ್ರ ಕುಮಾರಸ್ವಾಮಿಗೆ ಮುಖ್ಯಮಂತ್ರಿ ಗಾದಿಯನ್ನು ಕೊಡಿಸಲು BJPಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ತಮ್ಮ ಪಕ್ಷದ ಸಿದ್ಧಾಂತಕ್ಕೆ ದ್ರೋಹ ಬಗೆದಿದ್ದಾರೆ ಎಂದು ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ.

RELATED ARTICLES

Related Articles

TRENDING ARTICLES