ಬೆಂಗಳೂರು : ಹಿಜಬ್ ಧರಿಸಿ ಪರೀಕ್ಷೆ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅನುಮತಿಯನ್ನು ನೀಡಲಾಗಿದೆ.
ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗಾಗಿ ಅಕ್ಟೋಬರ್ 28,29 ರಂದು ನಡೆಯಲಿರುವ ಪರೀಕ್ಷೆಗಳಲ್ಲಿ ಹಿಜಬ್ ಧರಿಸಿ ಹಾಜರಾಗಲು ಅನುಮತಿ ನೀಡಿದೆ, ಇನ್ನು, ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಬರುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಒಂದು ಗಂಟೆಗೆ ಮೊದಲೇ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಪೊಲೀಸರಿಗೆ ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯ : ಸಿಎಂ ಸಿದ್ದರಾಮಯ್ಯ
ಬಿಜೆಪಿ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ ಹಿಜಬ್ ವಿವಾದ ಬಳಿಕ ಬ್ಯಾನ್ ಆಗಿತ್ತು ಇದೀಗ ಮತ್ತೆ ಹಿಜಬ್ ಧರಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅನುಮತಿ ನೀಡಿದೆ.
ಇದರೊಂದಿಗೆ ಮುಂದಿನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲೂ ಹಿಜಬ್ ಗೆ ಅನುಮತಿ ಸಿಗಲಿದ್ಯಾ, ಹಿಜಬ್ ವಿಚಾರವಾಗಿ ಮತ್ತೆ ರಾಜ್ಯದಲ್ಲಿ ವಿವಾದ ಭುಗಿಲೇಳಲಿದ್ಯಾ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರ ಹೋರಾಟ ಮುಂದುವರೆಸಲಿದೆಯಾ ಎನ್ನುವುದನ್ನು ಕಾದುನೋಡಬೇಕಾಗಿದೆ.