ಬೆಂಗಳೂರು : ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ 5 ಲಕ್ಷ ರೂ. ಬಡ್ಡಿ ರಹಿತ ಸಾಲ ಸೌಲಭ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಾಡಿನ ಮಹಿಳೆಯರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವಲಯದಲ್ಲಿ ಮುಕ್ತವಾಗಿ ಭಾಗವಹಿಸುವ ಅವಕಾಶ ಮತ್ತು ಸುರಕ್ಷಿತ ವಾತಾವರಣವನ್ನು ಒದಗಿಸಲು ನಮ್ಮ ಸರ್ಕಾರವು ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಮಹಿಳೆಯರ ಸುರಕ್ಷತೆಗಾಗಿ 6 ನೂತನ ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುವುದು. ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 5 ಲಕ್ಷದ ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ನೀಡಲಾಗುವುದು. ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯ ಕಲ್ಪಿಸುವುದಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಿಸಿ, ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿದ್ದೇವೆ ಎಂದು ಹೇಳಿದ್ದಾರೆ.
ಸ್ತ್ರೀ ಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರವು ಸ್ತ್ರೀ ಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಾಡಿನ ಮಹಿಳೆಯರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವಲಯದಲ್ಲಿ ಮುಕ್ತವಾಗಿ ಭಾಗವಹಿಸುವ ಅವಕಾಶ ಮತ್ತು ಸುರಕ್ಷಿತ ವಾತಾವರಣವನ್ನು ಒದಗಿಸಲು ನಮ್ಮ ಸರ್ಕಾರವು ಬದ್ಧವಾಗಿದೆ. ಮಹಿಳೆಯರ ಸುರಕ್ಷತೆಗಾಗಿ 6 ನೂತನ ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವ ಮತ್ತು ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ… pic.twitter.com/dddbm4z81n
— CM of Karnataka (@CMofKarnataka) October 22, 2023