Tuesday, December 3, 2024

ಮಾಜಿ ಸ್ಪೀಕರ್ ಆಪ್ತನ ಬರ್ಬರ ಕೊಲೆ!

ಕೋಲಾರ : ಮಾಜಿ ಸ್ಟೀಕರ್‌ ರಮೇಶ್‌ ಕುಮಾರ್‌ ಬೆಂಬಲಿಗನನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮುಳಬಾಗಿಲು ರಸ್ತೆ ಬಳಿ ನಡೆದಿದೆ.

ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ ಕೌನ್ಸಿಲರ್ ಸೀನಪ್ಪ ಅಲಿಯಾಸ್ ಶ್ರೀನಿವಾಸ್ ಎಂಬುವವರು ಮೃತರು. ಮುಳಬಾಗಿಲು ರಸ್ತೆಯ ನಿರ್ಮಾಣ ಹಂತದ ರೆಸ್ಟೋರೆಂಟ್ ಬಳಿ ಆರು ಮಂದಿ ಅಪರಿಚಿತರು ದಾಳಿ ಮಾಡಿ ಹಲ್ಲೆ ನಡೆಸಿ ಪರಾರಿ ಆಗಿದ್ದಾರೆ. ತೀವ್ರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶ್ರೀನಿವಾಸ್‌ ಅವರನ್ನು ಕೂಡಲೇ ಆರ್‌ಜೆ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಶ್ರೀನಿವಾಸ್‌ ಮೃತಪಟ್ಟಿದ್ದಾರೆ.

ಇದನ್ನೂ ಓದಿ: 150 ಕೋಟಿ ರೂ. ವೆಚ್ಚದಲ್ಲಿ ಮಹಾರಾಣಿ ಕಾಲೇಜು, ಹಾಸ್ಟೆಲ್‌ ಕಾಮಗಾರಿ: ಸಿಎಂ

ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಿಗೆ ಪೊಲೀಸರು ಹುಡುಕಾಟವನ್ನು ನಡೆಸಿದ್ದಾರೆ. ಸುಪಾರಿ ಪಡೆದು ಕೊಲೆಗೆ ಯತ್ನಿಸಿರುವ ಆರೋಪವಿದೆ. ಶ್ರೀನಿವಾಸ್‌ ಮುಂದಿನ ಲೋಕಸಭಾ ಚುನಾವಣೆ ಆಕಾಂಕ್ಷಿಯಾಗಿದ್ದರು. ಮಾಜಿ ಸ್ಪೀಕರ್ ರಮೇಶ್ ಕುಮಾರ್, ಗೃಹ ಸಚಿವ ಪರಮೇಶ್ವರ್‌ ಅವರಿಗೂ ಆಪ್ತರಾಗಿದ್ದರು.

RELATED ARTICLES

Related Articles

TRENDING ARTICLES