ದಾವಣಗೆರೆ: ಎರಡೂವರೆ ವರ್ಷದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗಾಣಿಗ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಶಾಸಕ ರವಿಕುಮಾರ್, ಅವರು ರಾಜ್ಯಾಧ್ಯಕ್ಷರಾಗಿ ಪಕ್ಷಕ್ಕಾಗಿ ದುಡಿದಿದ್ದಾರೆ. ಹೈಕಮಾಂಡ್ನಲ್ಲಿ ಏನು ತೀರ್ಮಾನ ಆಗಿದೆಯೋ ಗೊತ್ತಿಲ್ಲ. ಆದರೆ ಸಿಎಂ ಆಗೋದು ಮಾತ್ರ ಖಚಿತ ಎಂದು ಹೇಳಿದರು. ಈಗಿರುವ ಸಿಎಂ ಒಳ್ಳೆಯ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಸುಮ್ಮನೆ ಬಿಜೆಪಿಯವರು ಇಲ್ಲಸಲ್ಲದ ಹೇಳ್ಕೊಂಡು ಓಡಾಡುತ್ತಿದ್ದಾರೆ.
ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಳುವಾಗಿದ್ದ ಮಗು ತಮಿಳುನಾಡಿನಲ್ಲಿ ಪತ್ತೆ!
ನಮ್ಮ ಸರ್ಕಾರ 5 ಕಲ್ಯಾಣ ಯೋಜನೆಗಳನ್ನ ಕೊಟ್ಟಿದ್ದು, ಜನರಿಗೆ ತಲುಪಿವೆ ಎಂದರು. ಈ ಬಾರಿ ಲೋಕಸಭಾ ಚುನಾವಣೆ ವೇಳೆ ಮಂಡ್ಯದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಸಂಸದೆ ಸುಮಲತಾ ಅಂಬರೀಶ್ ನಮ್ಮ ಪಕ್ಷದಲ್ಲಿ ಇಲ್ಲ ಬಿಜೆಪಿಗೆ ಹೋಗಿದ್ದಾರೆ. ಹಾಗಾಗಿ ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಹೇಳಿದರು.