Friday, November 22, 2024

ದೇಶಾದ್ಯಂತ ಈರುಳ್ಳಿ ಬೆಲೆಯಲ್ಲಿ ಬಾರಿ ಏರಿಕೆ: ಶತಕದತ್ತ ಈರುಳ್ಳಿ ದರ?

ಬೆಂಗಳೂರು: ದೇಶಾದ್ಯಂತ ಈರುಳ್ಳಿ ಬೆಲೆ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಮ್ಮೆಲೇ ಶೇ.57ರಷ್ಟು ಬೆಲೆ ಏರಿಕೆಯಿಂದಾಗಿ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಸ್ತುತ ದೇಶದ ಬಹುತೇಕ ಭಾಗಗಳಲ್ಲಿ ಒಂದು ಕಿಲೋ ಈರುಳ್ಳಿ 50-60 ರೂ. ಆಗಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.

ಕರ್ನಾಟಕದಲ್ಲೂಈರುಳ್ಳಿ ಬೆಲೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಈರುಳ್ಳಿ ಬೆಲೆ ಹೆಚ್ಚುತ್ತಿದ್ದು, ಆತಂಕಕಾರಿಯಾಗಿದೆ. ಟೊಮೆಟೊ ಬಳಿಕ ಈಗ ಈರುಳ್ಳಿ ಆ ಮಟ್ಟಕ್ಕೆ ಬರುವುದು ಅನುಮಾನ. ಸಂಗ್ರಹವಾಗಿರುವ ಈರುಳ್ಳಿಯನ್ನು ಸಬ್ಸಿಡಿಯಲ್ಲಿ ಮಾರಾಟ ಮಾಡಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇದರಿಂದ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ರಾಜಸ್ಥಾನ ಚುನಾವಣೆ: ಕಾಂಗ್ರೆಸ್‌ನಿಂದ 7 ಗ್ಯಾರಂಟಿ!

ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ವರ್ಷ ಇದೇ ವೇಳೆಗೆ ಒಂದು ಕಿಲೋ ಈರುಳ್ಳಿ 30 ರೂಪಾಯಿ ಇತ್ತು, ಆದರೆ ಈಗ ಪ್ರದೇಶವಾರು ಕಿಲೋಗೆ 50-60 ರೂಪಾಯಿ ಇದೆ. ದೆಹಲಿಯಲ್ಲಿ ಈರುಳ್ಳಿ ಕೆಜಿಗೆ 47-50 ರೂಪಾಯಿ ಇದ್ದರೆ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ 60 ರೂಪಾಯಿ ಇದೆ.

RELATED ARTICLES

Related Articles

TRENDING ARTICLES