ನವದೆಹಲಿ : ಚೀನಾದ ಹಾಂಗ್‌ಝೌನಲ್ಲಿಹಾಂಗ್ಝೌನಲ್ಲಿ ನಡೆಯುತ್ತಿರುವ ಪ್ಯಾರಾ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ 111 ಪದಕಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಭಾರತದ ಕ್ರೀಡಾಪಟುಗಳು ಈವರೆಗೆ 29 ಚಿನ್ನ, 31 ಬೆಳ್ಳಿ, 51 ಕಂಚಿನ ಪದಕಗಳನ್ನು ಮುಡಿಗೇರಿಸಿ ಕೊಂಡಿದ್ದಾರೆ. ಈ ಮೂಲಕ ಭಾರತ ಪದಕ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದುಕೊಂಡಿದೆ. 214 ಚಿನ್ನದ ಪದಕ ಸೇರಿ ಒಟ್ಟು 521 ಪದಕಗಳನ್ನು ಗೆದ್ದಿರುವ ಚೀನಾ ಪದಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ.
ಭಾರತದ ಕ್ರೀಡಾಪಟುಗಳ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಯಶಸ್ಸು ನಮ್ಮ ಕ್ರೀಡಾಪಟುಗಳ ಸಂಪೂರ್ಣ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢತೆಯ ಫಲವಾಗಿದೆ. ಈ ಗಮನಾರ್ಹ ಮೈಲಿಗಲ್ಲು ನಮ್ಮ ಹೃದಯದಲ್ಲಿ ಅಪಾರ ಹೆಮ್ಮೆಯನ್ನು ತುಂಬುತ್ತದೆ. ನಮ್ಮ ಕ್ರೀಡಾಪಟುಗಳು, ತರಬೇತುದಾರರಿಗೆ ನಾನು ಮೆಚ್ಚುಗೆ ಮತ್ತು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಜಯಗಳು ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತವೆ. ನಮ್ಮ ಯುವಕರಿಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಕ್ರೀಡಾಪಟುಗಳ ನೆನಪಿಸುತ್ತಾರೆ ಎಂದು ಮೋದಿ ಕೊಂಡಾಡಿದ್ದಾರೆ.
ನಿನ್ನೆಯವರೆಗೆ ಭಾರತದ ಅಥ್ಲೀಟ್ಗಳು 99 ಪದಕಗಳನ್ನು ಗೆದ್ದಿದ್ದರೆ ಇಂದು ದಿಲೀಪ್ ಗವಿತ್ 400 M-T47 ಓಟದ ಸ್ಫರ್ಧೆಯಲ್ಲಿ ಚಿನ್ನದ ಪದಕ ಪಡೆದರು. ಈ ಪದಕದೊಂದಿಗೆ ಭಾರತದ ಪದಕಗಳ ಸಂಖ್ಯೆ (ಶತಕ) ತಲುಪಿತು.
India’s extraordinary performance at the Asian Para Games has left the nation thrilled! I congratulate our remarkable athletes for bringing home a record-breaking 111 medals. This achievement is a testament to the unwavering dedication and indomitable spirit of our athletes. pic.twitter.com/C2fyJDownB
— Narendra Modi (@narendramodi) October 28, 2023