Thursday, September 19, 2024

ರಾಜ್ಯದಲ್ಲಿ ಒಂದು ವಾರ ವರುಣಾರ್ಭಟ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಪಣಂಬೂರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 16.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಈ ಬಾರಿ ಮುಂಗಾರಿನಲ್ಲಿ ಮಳೆ ತುಂಬಾ ಕಡಿಮೆಯಾಗಿದೆ, ಹಲವು ಜಿಲ್ಲೆಗಳು ಬರದಿಂದ ಕಂಗೆಟ್ಟಿವೆ, ಹಿಂಗಾರು ಮಳೆಯಾದರೂ ಉತ್ತಮವಾಗಿ ಬಂದಲ್ಲಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕೊಂಚ ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

RELATED ARTICLES

Related Articles

TRENDING ARTICLES