Friday, November 22, 2024

ಮರಾಠ ಮೀಸಲಾತಿ ಕಿಚ್ಚು: ಕರ್ನಾಟಕ-ಮಹಾರಾಷ್ಟ್ರ ಮಧ್ಯೆ‌ ಬಸ್​​ ಸಂಚಾರ ಸ್ಥಗಿತ!

ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೆಚ್ಚಳಮಾಡುವಂತೆ ಆಗ್ರಹಿಸಿ ಪ್ರತಿಭಟನೆಗಳು ತೀವ್ರಗೊಂಡಿದ್ದು ಎನ್​ಸಿಪಿ ಕಚೇರಿ ಮುಖಂಡರ ಮನೆಗಳಿಗೂ ಬೆಂಕಿ ಹಚ್ಚಿರುವ ಘಟನೆಗಳು ನಡೆದಿದೆ.

ಮಹಾರಾಷ್ಟ್ರದಲ್ಲಿ ಭುಗಿಲೆದ್ದ ಪ್ರತಿಭಟನೆ ಹಿನ್ನೆಲೆ ಕರ್ನಾಟಕದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್​​ಗೆ ಬೆಂಕಿ ಹಚ್ಚಲಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಇದನ್ನು ಓದಿ: ಕೇಂದ್ರ ಗುಪ್ತಚರ ಇಲಾಖೆ ಪೊಲೀಸ್​ ಸಿಬ್ಬಂದಿ ಆತ್ಮಹತ್ಯೆಗೆ ಶರಣು!

ಮಹಾರಾಷ್ಟ್ರದ ಉಸ್ಮಾನಾಬಾದ್​ ಜಿಲ್ಲೆಯ ಉಮರಗಾ ತಾಲೂಕಿನ ತುರೋರಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್​ಗೆ ಬೆಂಕಿ ಹಚ್ಚಿದ್ದು, ಆಕ್ರೋಶ ಭುಗಿಲೆದ್ದಿದೆ. ಇನ್ನೂ ಹೆಚ್ಚಿನ ಅವಘಡಗಳು ಸಂಬಂಧಿಸದಂತೆ ಕರ್ನಾಟಕ-ಮಹಾರಾಷ್ಟ್ರ ಮಧ್ಯೆ‌ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.

ಮರಾಠ ಮೀಸಲಾತಿ ಕಿಚ್ಚು ರಾಜ್ಯಾದ್ಯಂತ ವ್ಯಾಪಿಸಿದ್ದು, ಆಡಳಿತರೂಢ ಬಿಜೆಪಿ-ಶಿವಸೇನೆ-ಎನ್​ಸಿಪಿ ಸರ್ಕಾರದ ಶಾಸಕರು ಹಾಗೂ ಸಚಿವರ ಮನೆಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಘರ್ಷಣೆ ಬೆನ್ನಲ್ಲೇ ಮಹಾರಾಷ್ಟ್ರದ ಬೀಡ್​ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

RELATED ARTICLES

Related Articles

TRENDING ARTICLES