ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡಬೇಕು ಎಂದು ಬೆಂಗಳೂರು ಜಿಲ್ಲಾಡಳಿತ ಹಾಗೂ ಇನ್ನಿತರ ಪ್ರಾಧಿಕಾರಗಳಿಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.
ಇದರೊಂದಿಗೆ, ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಸುಗಮವಾದಂತಾಗಿದೆ. ನವೆಂಬರ್ 1ರಿಂದ 3ರ ವರೆಗೆ ಕನ್ನಡ ರಾಜ್ಯೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಡೆಸಬಹುದು. ಆದರೆ, ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂಥ ಕಾರ್ಯಕ್ರಮ ನಡೆಸಬಾರದು ಎಂದು ಕೋರ್ಟ್ ಸೂಚನೆ ನೀಡಿದೆ.
ರಾಜ್ಯದ ಧ್ವಜ ಮಾತ್ರ ಹಾರಾಟ ಮಾಡಿಸುವುದಾಗಿ ಅರ್ಜಿದಾರರು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡಬೇಕು ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಪ್ರಕಟಿಸಿದೆ.