ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸೊಳ್ಳೆಗಳಲ್ಲಿ ಜಿಕಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಗುರುವಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಜನರು ಅನಾವಶ್ಯಕವಾಗಿ ಆತಂಕಗೊಳ್ಳದಂತೆ, ಜ್ವರದ ಸಂದರ್ಭದಲ್ಲಿ ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವಂತೆ ಮನವಿ ಮಾಡಿದೆ.
ಚಿಕ್ಕಬಳ್ಳಾಪುರದ ಆರು ಕೆರೆಗಳಿಂದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದಾಗ ಈಡಿಸ್ ಈಜಿಪ್ಟಿ ಸೊಳ್ಳೆಗಳಲ್ಲಿ ವೈರಸ್ ಪತ್ತೆಯಾಗಿದೆ. ಈ ಕುರಿತು ಮಾರ್ಗಸೂಚಿ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ರಂದೀಪ್ ಡಿ. ಜ್ವರ, ತಲೆನೋವು, ದದ್ದುಗಳು, ಸ್ನಾಯು ನೋವು ಮತ್ತು ಕೀಲು ನೋವು ಈ ವೈರಸ್ ನ ಲಕ್ಷಣವಾಗಿದ್ದು, ಎರಡರಿಂದ ಏಳು ದಿನಗಳವರೆಗೆ ಇರುತ್ತದೆ. ಪ್ರಸ್ತುತ, ರಾಜ್ಯದಲ್ಲಿ ಜಿಕಾ ವೈರಸ್ ಸೋಂಕಿನ ಯಾವುದೇ ಪ್ರಕರಣಗಳಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ನವೆಂಬರ್ 3,4 ರಂದು ರಜೆ ಘೋಷಣೆ!
ಜ್ವರ ಮತ್ತು ರೋಗಲಕ್ಷಣಗಳನ್ನು ಹೊಂದಿರುವ ವ್ಯಕ್ತಿಗಳು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬೇಕು. ಜಿಕಾ ವೈರಸ್ ರೋಗಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಇಲ್ಲದಿರುವುದರಿಂದ, ರೋಗಲಕ್ಷಣದ ಚಿಕಿತ್ಸೆಯಾಗಿದೆ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.