ತುಮಕೂರು: ಸಚಿವ ಜಿ.ಪರಮೇಶ್ವರ್ಗೆ ಸಿಎಂ ಆಗುವ ಅವಕಾಶವಿದೆ ಅಂತಾ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಪರಮೇಶ್ವರ್ ಈಗ ಹೋಮ್ ಮಿನಿಸ್ಟರ್ ಆಗಿದ್ದಾರೆ. ಮುಂದೆ ಏನು ಬೇಕಾದ್ರೂ ಆಗಬಹುದು. ಡಾಕ್ಟರೇ ನಿಮಗೆ ಅದೃಷ್ಟಯಿದೆ ನಡೆಸುತ್ತೀರಿ ಅಂತ ಹಿಂದೊಮ್ಮೆ ಹೇಳಿದ್ದೆ. ಯಾಕಂದ್ರೆ ಅವರಿಗೆ ಅದೃಷ್ಟ ಇದೆ ಅಂತಾ ನಾನು ಭಾವಿಸಿದ್ದೇನೆ.
ಇದನ್ನೂ ಓದಿ: ಹೈಕಮಾಂಡ್ ಸೂಚಿಸಿದರೇ ನಾನೆ ಸಿಎಂ: ಸಚಿವ ಪ್ರಿಯಾಂಕ್ ಖರ್ಗೆ!
ನಮ್ಮ ಜಿಲ್ಲೆಯಿಂದ ಒಬ್ಬ ಮುಖ್ಯಮಂತ್ರಿ ಆಗ್ತಾರೆ ಅಂದ್ರೆ ನಾವೆಲ್ಲಾ ಸಂತೋಷ ಪಡುತ್ತೇವೆ. ನಾವೇಲ್ಲಾ ಮುಖ್ಯಮಂತ್ರಿ ಆದ್ದಂತೆ ಭಾವಿಸುತ್ತೇನೆ. ಸಿದ್ದರಾಮಯ್ಯ ಇರೊವರೆಗೆ ನಾವೆಲ್ಲಾ ಸಿದ್ದರಾಮಯ್ಯ ಪರ. ನಾವು, ಪರಮೇಶ್ವರ್ ಇಬ್ಬರು ಅವರ ಪರವಿರುತ್ತೇವೆ. ಸಿದ್ದರಾಮಯ್ಯ ಹೊರತು ಪಡಿಸಿದ್ರೆ, ಪರಮೇಶ್ವರ್ ಸಿಎಂ ಆಗಬೇಕು ಅಂತ ಬಯಸುತ್ತೇವೆ. ಹಾಗಾಗಿ ನನ್ನ ಮನಸಿನ ಭಾವನೆ ಹೇಳಿದ್ದೇನೆ. ನಾನು ಯಾರಿಗೂ ಹೆದರಲ್ಲ, ನಾನಂತೂ ಮುಂದೆ ಚುನಾವಣೆಗೆ ನಿಲ್ಲೋದಿಲ್ಲ ಎಂದರು.