ಬೆಂಗಳೂರು: ನಗರ ನಿವಾಸಿಗಳಿಗೆ ಮತ್ತೆ ಚಿರತೆ ಆತಂಕ ಶುರುವಾಗಿದೆ. ನೈಸ್ ರಸ್ತೆ ಸಮೀಪದ ಚಿಕ್ಕತೋಗೂರು ಬಳಿ ಚಿರತೆ ಪ್ರತ್ಯಕ್ಷವಾಗಿದೆ.
ಶನಿವಾರ ಸಂಜೆ 7.40ರ ಸಮಯದಲ್ಲಿ ಚಿಕ್ಕತೋಗೂರು ಬಳಿ ಇರುವ ಮನೆ ಕಂಪೌಂಡ್ ಒಳಗೆ ಚಿರತೆ ನುಗ್ಗಿದೆ. ಬಾಗಿಲು ಬಳಿ ಬಂದ ಚಿರತೆ ಕಂಡು ಬಾಲಕ ಕಿರುಚಾಡಿದ್ದಾನೆ. ಬಾಲಕನ ಕಿರುಚಾಟಕ್ಕೆ ಚಿರತೆ ಓಡಿ ಹೋಗಿದೆ. ಕೆ.ಆರ್.ಪುರಂ ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಯಾರಾದ್ರೂ ನನ್ನ ಪರ ಮಾತಾಡಿದ್ರೆ ನೋಟಿಸ್ ಕೊಡ್ತೀನಿ:ಡಿಕೆಶಿ
ಘಟನೆ ಸಂಬಂಧ ಸ್ಥಳಪರಿಶೀಲನೆ ನಡೆಸಿದ ಅರಣ್ಯ ಸಿಬ್ಬಂದಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಈ ವೇಳೆ ಶನಿವಾರ ಸಂಜೆ ಸುರಿದ ಮಳೆಯಿಂದಾಗಿ ಹೆಜ್ಜೆ ಗುರುತು ಪತ್ತೆಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.