ಚಿಕ್ಕಮಗಳೂರು: ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ನಗರದ ಶಂಕರಮಠ ಮುಂಭಾಗ ಧರ್ಮಸಭೆ ನಡೆಸಲು ತೀರ್ಮಾನಿಸಲಾಗಿದೆ.
ಈ ಸಭೆಯಲ್ಲಿ ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಗಂಗಾಧರ್ ಕುಲಕರ್ಣಿ ಸೇರಿದಂತೆ ಸಾವಿರಾರು ಶ್ರೀ ರಾಮ ಸೇನೆ ಕಾರ್ಯಕರ್ತರು ಭಾಗಿಯಾಗಲಿದ್ದು ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾವನ್ನ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಧರ್ಮಸಭೆ ನಡೆಸಲಿದ್ದಾರೆ.
ಇದನ್ನೂ ಓದಿ: ಮನೆಯ ಕಾಂಪೌಂಡ್ ಒಳ ನುಗ್ಗಿದ ಚಿರತೆ: ಬಾಲಕನ ಚೀರಾಟಾಕ್ಕೆ ಚಿರತೆ ಪರಾರಿ!
ಧರ್ಮ ಸಭೆ ಬಳಿಕ ಬೃಹತ್ ಶೋಭಾಯಾತ್ರೆಗೆ ಚಾಲನೆ ನೀಡಲಾಗುತ್ತದೆ. ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಶೋಭಾಯಾತ್ರೆ ನಡೆಯಲಿದೆ.