Thursday, October 31, 2024

ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ಮಹಿಳಾ ಅಧಿಕಾರಿಗಳ ಕೊಲೆ ಹೆಚ್ಚಳ!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರಿ ಮಹಿಳಾ ಅಧಿಕಾರಿಗಳ ಕೊಲೆ, ಸರ್ಕಾರಿ ಅಧಿಕಾರಿಗಳ ಮೇಲೆ ಗುಂಪು ಹಲ್ಲೆ ಸೇರಿದಂತೆ ಮತೀಯ ಅಪರಾಧಗಳು ಹೆಚ್ಚುತ್ತಿವೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

ಈ ಕುರಿತು ಟ್ವೀಟ್‌ ಮಾಡಿ, ಕಾಂಗ್ರೆಸ್‌ನ ಆಡಳಿತದ ಅವಧಿ ಇದ್ದಾಗ ಕರ್ನಾಟಕವು ಭಯೋತ್ಪಾದಕರ ಅಡಗುತಾಣವಾಗುತ್ತಿದೆ. ಈ ಸರ್ಕಾರದಿಂದ ಒಂದಲ್ಲ ಒಂದು ರೀತಿಯ ಅವಾಂತರಗಳು ಶುರುವಾಗಿವೆ ಎಂದು ಟೀಕಿಸಿದೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ವಿಶ್ವವಿಖ್ಯಾತ ವಿತ್ತತಜ್ಞ ಎಂದು ಟಾಂಗ್​ ನೀಡಿದ ಹೆಚ್​ಡಿಕೆ!

ಕಾಂಗ್ರೆಸ್ ಕರ್ನಾಟಕವನ್ನು ಎಲ್ಲ ವಲಯಗಳಲ್ಲಿಯೂ ದಿವಾಳಿ ಮಾಡಲು ಅಧಿಕಾರಕ್ಕೆ ಬಂದಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸುವ ಜೊತೆ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುತ್ತಿರುವುದು ನಿಜಕ್ಕೂ ಆತಂಕಕಾರಿ ಎಂದು ಬಿಜೆಪಿ ಕಿಡಿಕಾರಿದೆ.

RELATED ARTICLES

Related Articles

TRENDING ARTICLES