Monday, November 25, 2024

PSI ಮರುಪರೀಕ್ಷೆ : ಕಷ್ಟಪಟ್ಟು ಓದಿದವರು ಪಾಸಾಗಬೇಕೆಂಬುದು ಬಿಜೆಪಿ ಆಶಯ : ಆರಗ ಜ್ಞಾನೇಂದ್ರ

ಶಿವಮೊಗ್ಗ : PSI ನೇಮಕಾತಿ ಮರು ಪರೀಕ್ಷೆಗೆ ಸಂಬಂಧ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿರುವ ಬಗ್ಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಹೈಕೋರ್ಟ್ ನ ವಿಭಾಗೀಯ ಪೀಠದ ಆದೇಶಕ್ಕೆ ಸ್ವಾಗತ ಮಾಡುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಈ ಬಗ್ಗೆ ನಾವೇ ತನಿಖೆ ನಡೆಸಲು ಆದೇಶ ಮಾಡಿದ್ದೆವು. ಸಿಓಡಿ ತಂಡ ಅಕ್ರಮವೆಸಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸಿತ್ತು. ಆಗ ಆಯ್ಕೆಯಾಗಿದ್ದ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗಿದ್ದರು. ಈಗ ಕೋರ್ಟ್ ಆಗಿನ ಸರ್ಕಾರದ ಆದೇಶ ಎತ್ತಿ ಹಿಡಿದಿದೆ ಎಂದು ತಿಳಿಸಿದ್ದಾರೆ.

ಪಿಎಸ್ಐ ಪುನರ್ ಪರೀಕ್ಷೆ ನಡೆಸಬೇಕು

ಪಿಎಸ್ಐ ಪುನರ್ ಪರೀಕ್ಷೆ ನಡೆಸಬೇಕು. ಪರೀಕ್ಷೆಯನ್ನು ಸ್ವತಂತ್ರ ಸಂಸ್ಥೆ ಮೂಲಕ ನಡೆಸಬೇಕು. ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆಯಬಾರದು. ಕಷ್ಟಪಟ್ಟು ಓದಿದವರು ಪಾಸಾಗಬೇಕೆಂಬ ಬಿಜೆಪಿ ಸರ್ಕಾರದ ಆಶಯವಿತ್ತು. ಇದನ್ನು ಮಾನ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ನಮ್ಮ ಅಭಿಪ್ರಾಯಕ್ಕೆ ಮಾನ್ಯತೆ ಸಿಕ್ಕಿದ್ದನ್ನು ಸ್ವಾಗತ ಕೋರುತ್ತೇನೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

RELATED ARTICLES

Related Articles

TRENDING ARTICLES