ಬೆಂಗಳೂರು : ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಜಿ ಸಿಎಂ ಡಾ.ಬಿ.ಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.
ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಚರ್ಚೆಗೆ ತೆರೆ ಬಿದ್ದಂತಾಗಿದೆ.
ರೇಸ್ನಲ್ಲಿ ಇದ್ದವರು ಯಾರು?
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿ.ಟಿ. ರವಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಅಂತಿಮವಾಗಿ ಇದೀಗ ಬಿ.ವೈ. ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಒಲಿದಿದೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಮತ್ತೆ ಬಿ.ಎಸ್ ಯಡಿಯೂರಪ್ಪರಿಗೆ ಮಣೆ ಹಾಕಿದೆ.
ಹೈಕಮಾಂಡ್ನಿಂದ ದೀಪಾವಳಿ ಗಿಫ್ಟ್
ಬಿ.ವೈ ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡುವ ಮೂಲಕ ಬಿಜೆಪಿ ಹೈಕಮಾಂಡ್ ದೀಪಾವಳಿ ಗಿಫ್ಟ್ ನೀಡಿದೆ. ಈ ಮೂಲಕ ಪುತ್ರನಿಗೆ ರಾಜ್ಯಾಧ್ಯಕ್ಷ ಪಟ್ಟ ಕೊಡಿಸುವಲ್ಲಿ ಬಿಎಸ್ವೈ ಸಕ್ಸಸ್ ಆಗಿದ್ದಾರೆ ಎನ್ನಬಹುದು. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯ ಕಡೆಗಣನೆ ಎಂಬ ವಿಪಕ್ಷಗಳ ಟೀಕೆಗೆ ಬಿಜೆಪಿ ಟಕ್ಕರ್ ಕೊಟ್ಟಿದೆ.
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಶ್ರೀ ಬಿ ವೈ ವಿಜಯೇಂದ್ರ ಅವರಿಗೆ ಹಾರ್ದಿಕ ಶುಭಾಶಯಗಳು.
ಹಿರಿಯರ ಆಶೀರ್ವಾದ ಹಾಗೂ ಕಿರಿಯರ ಬೆಂಬಲದೊಂದಿಗೆ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಿ ಮುನ್ನಡೆಸುತ್ತಾರೆ ಮತ್ತು ಮಾಜಿ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರು, ದಿ. ಶ್ರೀ ಅನಂತಕುಮಾರ್ ಅವರೇ ಮುಂತಾದ ನಾಯಕರುಗಳ… pic.twitter.com/VZvI4fYjtJ
— B Y Raghavendra (@BYRBJP) November 10, 2023