Thursday, December 19, 2024

ಡಿಕೆಶಿ​ ಜೊತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ : ಸತೀಶ್​ ಜಾರಕಿಹೊಳಿ

ಬೆಂಗಳೂರು : ಬೆಳಗಾವಿ ರಾಜಕಾರಣದಲ್ಲಿ ಹೊರಗಿನವರ ಹಸ್ತಕ್ಷೇಪದ ಬಗ್ಗೆ ಮುನಿಸಿಕೊಂಡಿರುವ ಸಚಿವ ಸತೀಶ್​ ಜಾರಕಿಹೊಳಿ ಇದೀಗ ಮತ್ತೆ ಡಿಸಿಎಂ ಡಿ.ಕೆ. ಶಿವಕುಮಾರ್ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ. ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕೇ ವಿನಃ ನಮ್ಮ ಹಂತದಲ್ಲಿ ಏನೂ ಇಲ್ಲ. ನಾನು ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ನಮ್ಮ ನಿವಾಸಕ್ಕೆ ಹಲವು ಬಾರಿ ಬಂದಿದ್ದಾರೆ. ಪಕ್ಷದ ವಿಚಾರ ಮತ್ತು ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ಆಗಿದೆ. ಮೈಸೂರಿಗೆ ಹೋಗುವ ಉದ್ದೇಶ ಬೇರೆ, ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಉದ್ದೇಶವೇ ಬೇರೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು. ಅಡ್ಜಸ್ಟ್​ಮೆಂಟ್ ಎನ್ನುವ ಪ್ರಶ್ನೆ ಇಲ್ಲ. ಲೋಕಸಭೆ ಚುನಾವಣೆಯಾದ ಬಳಿಕ ಚರ್ಚೆಗೆ ಬರಬಹುದು. ಚುನಾವಣೆ ಬಳಿಕ ಯಾವ ಹೊಸ ವಿಚಾರ ಬರುತ್ತವೆಂದು ಕಾದು ನೋಡೋಣ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES