ಬೆಂಗಳೂರು: ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಕಡ್ಡಾಯವಾಗಿ ಅಳವಡಿಸಬೇಕು ಎಂದು ಈಗಾಗಲೇ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಾಗಿ ಅರ್ಜಿ ಸಲ್ಲಿಸಲು ನ. 17 ಕೊನೇ ದಿನ ಎಂದು ತಿಳಿಸಲಾಗಿತ್ತು.
ಇದುವರೆಗೆ ಪ್ರತಿ ಬಾರಿ ಪೊಲೀಸರು ಹಿಡಿದಾಗಲೂ 500 ರೂಪಾಯಿಂದ 1 ಸಾವಿರ ರೂಪಾಯಿ ವರೆಗೆ ದಂಡ ಕಟ್ಟಬೇಕಿತ್ತು. ಆದರೆ, ಈಗ ಆ ತಲೆಬಿಸಿ ಸದ್ಯದ ಮಟ್ಟಿಗೆ ತಪ್ಪಿದೆ. ಸರ್ಕಾರ ಸದ್ಯದ ಗಡುವನ್ನು ವಿಸ್ತರಣೆ ಮಾಡಿದ್ದು, ಫೆಬ್ರವರಿ 17ರವರೆಗೂ ಕಾಲಾವಕಾಶ ನೀಡಿದೆ.
ಇದನ್ನೂ ಓದಿ:ಇಂದಿನಿಂದ ನವೆಂಬರ್ 22ರವರೆಗೂ ಮಳೆ ಸಾಧ್ಯತೆ!
2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಆಗಸ್ಟ್ 17ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಅದೇ ರೀತಿ ಆ.18ರಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಹೀಗಾಗಿ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕಾಗಿದೆ.