Monday, November 25, 2024

ಮಧ್ಯಪ್ರದೇಶ ಚುನಾವಣೆ ಮತದಾನ ಆರಂಭ!

ಮಧ್ಯಪ್ರದೇಶ: ವಿಧಾನಸಭಾ ಚುನಾವಣೆಯ ಮತದಾನ ಇಂದು ನಡೆಯಲಿದ್ದು ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಬಹಿರಂಗ ಪ್ರಚಾರ ಅಂತ್ಯವಾಗಿದೆ.

ಎಲ್ಲಾ 230 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು  230 ವಿಧಾನಸಭಾ ಕ್ಷೇತ್ರಗಳಲ್ಲಿ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಮಧ್ಯಪ್ರದೇಶದಲ್ಲಿ 5.6 ಕೋಟಿ ಮತದಾರರಿದ್ದಾರೆ. ಇವರಲ್ಲಿ 2.88 ಕೋಟಿ ಪುರುಷ ಮತದಾರರು ಮತ್ತು 2.72 ಕೋಟಿ ಮಹಿಳಾ ಮತದಾರರಿದ್ದಾರೆ. ಒಟ್ಟು 22.36 ಲಕ್ಷ ಯುವಕರು ಪ್ರಥಮ ಬಾರಿಗೆ ಮತದಾನ ಮಾಡಲಿದ್ದಾರೆ.

ಇದನ್ನೂ ಓದಿ: ಪಿಚ್​ ವಿವಾದ: ಟೀಕಗಾರರಿಗೆ ಸುನೀಲ್ ಗವಾಸ್ಕರ್ ತಿರುಗೇಟು!

ಕಳೆದ 30 ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸ್ಟಾರ್ ಪ್ರಚಾರಕರು ಭರ್ಜರಿ ಪ್ರಚಾರ ನಡೆಸಿದ್ದಾರೆ‌‌‌. ಪ್ರಧಾನಿ ನರೇಂದ್ರ ಮೋದಿ, ಮಧ್ಯಪ್ರದೇಶದಲ್ಲಿ 15 ಸಾರ್ವಜನಿಕ ಸಭೆಗಳನ್ನು ನಡೆಸಿದ್ದಾರೆ‌. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ರಾಜ್ಯದಲ್ಲಿ ಅತಿ ಹೆಚ್ಚು 160 ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ 14 ಸಾರ್ವಜನಿಕ ಸಭೆಗಳನ್ನು ನಡೆಸಿದ್ದಾರೆ‌. ರಾಜ್ಯ ಬಿಜೆಪಿ ಅಧ್ಯಕ್ಷ ವಿ.ಡಿ ಶರ್ಮಾ 55 ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ‌.

RELATED ARTICLES

Related Articles

TRENDING ARTICLES