ಬೆಂಗಳೂರು ಗ್ರಾಮಾಂತರ: ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ, ಸರಕು ಸಾಗಣೆ ವಾಹನಗಳ ತಡೆರಹಿತ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಸ್ಯಾಟಲೈಟ್ ಟೌನ್ ರಿಂಗ್ ರೋಡ್ನ ಮೊದಲ ಹಂತದ ದೊಡ್ಡಬಳ್ಳಾಪುರ-ಹೊಸಕೋಟೆ ಮಾರ್ಗ ಸಂಚಾರಕ್ಕೆ ಮುಕ್ತವಾಗಿದೆ.
ದೊಡ್ಡಬಳ್ಳಾಪುರ ಬೈಪಾಸ್‌ನಿಂದ ಆರಂಭಗೊಂಡು ಹೊಸಕೋಟೆ ವರೆಗಿನ ನಾಲ್ಕು ಪಥ ರಸ್ತೆಯ 47 ಕಿ.ಮಿ.ನಿಂದ 76.150 ಕಿ.ಮಿ ವರೆಗೆ ಬಳಕೆದಾರರಿಗೆ ನಲ್ಲೂರು ದೇವನಹಳ್ಳಿ ಸುಂಕ ವಸೂಲಾತಿ ಕೇಂದ್ರದಲ್ಲಿ ಇಂದಿನಿಂದ ಶುಲ್ಕ ಸಂಗ್ರಹ ಮಾಡಲಾಗುತ್ತದೆ.
ಇದನ್ನೂ ಓದಿ: ಟೆಲಿಗ್ರಾಂ, ಫೋನ್‌ಪೇ ಪೇಟಿಎಂ ವಿರುದ್ಧ ಕೇಸ್!
ಇದು 2024ರ ಮಾರ್ಚ್31 ರವರೆಗೆ ಜಾರಿಯಲ್ಲಿರಲಿದೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯದ ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ.