ಬೆಂಗಳೂರು: ಲುಲು ಮಾಲ್ ಆರಂಭಕ್ಕೂ ಮುನ್ನ 6 ತಿಂಗಳು ಕರೆಂಟ್ ನೀಡಿಲ್ಲ. ಲುಲು ಮಾಲ್ ಬಳಕೆ ಮಾಡಿದ ವಿದ್ಯುತ್ ಬಿಲ್ಗೆ ದಂಡ ಹಾಕುತ್ತೀರಾ? ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ಹರಿಹಾಯ್ದರು.
ಇನ್ನೂ ಲುಲು ಮಾಲ್ಗೆ 24 ಎಕರೆ ಖರಾಬು ಭೂಮಿಯನ್ನ ಕಬಳಿಸಲಾಗಿದೆ. 1934ರ ಭೂಮಿಯ ದಾಖಲೆಗಳನ್ನು ಸುಟ್ಟು ಹಾಕಿ ನಾಶ ಮಾಡಿದ್ದಾರೆ. ಇವರೆಲ್ಲ ಹೇಗೆಲ್ಲಾ ದಾಖಲೆ ಬದಲಾಯಿಸಿದ್ದಾರೆಂದು ಗೊತ್ತಿದೆ ಎಂದರು.
ಇದನ್ನೂ ಓದಿ: ಪ್ರತಿಪಕ್ಷ ಸ್ಥಾನ ಉತ್ತರ ಕರ್ನಾಟಕಕ್ಕೇ ಬೇಕು : ಯತ್ನಾಳ್ ಪಟ್ಟು
ಭೂದಾಖಲೆಗಳನ್ನು ಅಕ್ರಮವಾಗಿ ತಿದ್ದುಪಡಿ ಮಾಡಿ ಭೂಮಿ ಕಬಳಿಸಿದ್ದಾರೆ. ಈ ಎಲ್ಲಾ ದಾಖಲೆಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಮಿ ಆರೋಪ ಮಾಡಿದರು.