Thursday, December 19, 2024

ಸರ್ವಾನುಮತದಿಂದ ವಿಪಕ್ಷ ನಾಯಕನಾಗಿ ಆರ್. ಅಶೋಕ್ ಆಯ್ಕೆ : ಬಿ.ವೈ. ವಿಜಯೇಂದ್ರ

ಬೆಂಗಳೂರು : ಆರ್​. ಅಶೋಕ್ ಅವರನ್ನು ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹು ದಿನಗಳಿಂದ ನಾವು ನೀವೆಲ್ಲರೂ ಕಾಯುತ್ತಿದ್ದಂತಹ ವಿಪಕ್ಷ ನಾಯಕನ ಸ್ಥಾನಕ್ಕೆ ಆರ್​. ಅಶೋಕ್ ಆಯ್ಕೆ ಮಾಡಿದ್ದಾರೆ. ಎಲ್ಲಾ ಶಾಸಕರುಗಳು ಸಹ ಒಗ್ಗಟ್ಟಾಗಿ ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ಅಧ್ಯಕ್ಷನಾಗಿ ಅಶೋಕ್​ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ನಾವೆಲ್ಲ ಒಗ್ಗಟ್ಟಾಗಿ, ಒಂದಾಗಿ, ರಾಜ್ಯದಲ್ಲಿರುವ ಬಡವರ ವಿರೋಧಿ, ರೈತ ವಿರೋಧಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಭ್ರಷ್ಟ ಸರ್ಕಾರವನ್ನು ರಾಜ್ಯದ ಜನರ ಮುಂದೆ ಕಿವಿ ಹಿಂಡುವ ಕೆಲಸ ಮಾಡುತ್ತೇವೆ. ನಮ್ಮೆಲ್ಲರ ಮುಮದಿನ ಗುರಿ ಲೋಕಸಭೆ ಚುನಾವಣೆ. 28 ಲೋಕಸಭಾ ಕ್ಷೇತ್ರಗಳನ್ನೂ ನಾವು ಗೆಲ್ಲುತ್ತೇವೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುತ್ತೇವೆ. ಮತ್ತೊಮ್ಮೆ ಮೋದಿ ಅವರನ್ನು ದೇಶದ ಪ್ರಧಾನಿಯಾಗಿ ಆಯ್ಕೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES