Sunday, November 3, 2024

ಟ್ರಾನ್ಸ್ ಫರ್​ಗೂ ನನಗೂ ಸಂಬಂಧವಿಲ್ಲ : ಕುಮಾರಸ್ವಾಮಿ ಮಾಡುತ್ತಿರುವುದು ನೀಚ ರಾಜಕಾರಣ : ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಹೆಚ್ ಡಿ ಕುಮಾರಸ್ವಾಮಿಯವರು ಮಾಡುತ್ತಿರುವುದು ನೀಚ ರಾಜಕಾರಣ, ಇನ್ಸ್​ಪೆಕ್ಟರ್​​ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ ನಾನು ಟ್ರಾನ್ಸ್ ಫರ್, ಹಣ ಎಂದು ಎಲ್ಲಿ ಹೇಳಿದ್ದೇನೆ ಎಂದು ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ತಾವು ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊವನ್ನಿಟ್ಟುಕೊಂಡು ಸರ್ಕಾರವನ್ನು, ಸಿಎಂ ಸಿದ್ದರಾಮಯ್ಯನವರನ್ನು ಕಟುವಾಗಿ ಟೀಕಿಸುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಾತನಾಡುತ್ತಿರುವುದು ನೀಚತನ. ಅವರೇ  ಅಧಿಕಾರದಲ್ಲಿದ್ದಾಗ ದಂಧೆ ಮಾಡುತ್ತಿದ್ದರು ಅನಿಸುತ್ತದೆ, ಹೀಗಾಗಿ ಅವರು ಮಾತೆತ್ತಿದರೆ ದಂಧೆ, ಲಂಚ, ಹಗರಣ ಬಗ್ಗೆ ಮಾತಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಜಾತಿ, ಧರ್ಮ ಬಿಟ್ಟು ಸ್ಪೀಕರ್ ಸ್ಥಾನ ನೋಡಬೇಕು : ಯು.ಟಿ.ಖಾದರ್

ನಾನು ಸಿಎಸ್​ಆರ್ ಫಂಡ್​​ ಬಗ್ಗೆ ನಾನು ಅವತ್ತು ಮಾತನಾಡಿದ್ದು. ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದ್ರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ. ಇನ್ಸ್​ಪೆಕ್ಟರ್​​ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ. ನಮ್ಮ ಕ್ಷೇತ್ರದಲ್ಲಿ ವಿವೇಕಾನಂದ ಅಂತಾ ಬಿಇಒ ಕೂಡ ಇದ್ದಾರೆ. ವಿಪಕ್ಷಗಳು ಹತಾಶರಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿವೆ. ಇವರು ಅಧಿಕಾರದಲ್ಲಿದ್ದರು, ಸಿಎಂ ಆಗಿಯೂ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂಧೆಯನ್ನೇ ಮಾಡುತ್ತಿದ್ದರಾ, ಭ್ರಷ್ಟಾಚಾರ, ದಂಧೆ ಆಗ್ತಿದೆ ಎಂದು ಸುಳ್ಳು ಆರೋಪ ಮಾಡಬಾರದು ಎಂದರು.

ನಾನು ವರುಣಾ ಕ್ಷೇತ್ರದ ಮಾಜಿ ಶಾಸಕ. ಈ ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳುವ ಕೆಲಸವನ್ನು ತಂದೆ ಸಿದ್ದರಾಮಯ್ಯನವರು ನನಗೆ ವಹಿಸಿದ್ದಾರೆ. ಕ್ಷೇತ್ರದ ಕೆಲಸಗಳು ಸಾಕಷ್ಟು ಇರುತ್ತವೆ. ನಾನು ಒಬ್ಬ ಖಾಸಗಿ ವ್ಯಕ್ತಿಯಲ್ಲ, ಸಾರ್ವಜನಿಕ ವ್ಯಕ್ತಿ, ನಮ್ಮ ಬಳಿ ಹತ್ತಾರು ಜನರು ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಬರುತ್ತಾರೆ, ವರ್ಗಾವಣೆ ಪ್ರತಿ ಸರ್ಕಾರದಲ್ಲಿಯೂ ಆಗುತ್ತಿರುತ್ತದೆ. ಹಿಂದೆ ಬಿಜೆಪಿ ಸರ್ಕಾರದಲ್ಲಿ ಕೂಡ ಆಗುತ್ತಿತ್ತು, ಹಾಗಾದರೆ ಅವರು ದಂಧೆಯಲ್ಲಿ ತೊಡಗಿದ್ದರೇ ಎಂದು ಪ್ರಶ್ನಿಸಿದರು.

 

RELATED ARTICLES

Related Articles

TRENDING ARTICLES