Friday, December 20, 2024

ದಯಮಾಡಿ ಶಿಳ್ಳೆ ಹೊಡೆಯುವುದು ಮಾಡಬೇಡಿ : ಸಿದ್ದರಾಮಯ್ಯ ಮನವಿ

ಬೆಂಗಳೂರು : ರಾಜಕೀಯ ಸಮಾರಂಭದಲ್ಲಿ ಶಿಳ್ಳೆ(ಸಿಳ್ಳೆ) ಹೊಡೆಯುವುದು ದಯಮಾಡಿ ಮಾಡಬೇಡಿ ಎಂದು ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ್ದಾರೆ.

ರಾಷ್ಟ್ರಾದ್ಯಂತ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆ ಮಾಡ್ತಾ ಇದ್ದೇವೆ. ಅವರು ಹುಟ್ಟಿದ ಸ್ಥಳ ರಾಜಕೀಯ ಕೇಂದ್ರವಾಗಿತ್ತು. ಅವರ ತಂದೆ, ತಾಯಿ, ತಾತ ಸಕ್ರಿಯ ರಾಜಕೀಯ ಮಾಡಿದವರು. ಅವರು ಸಣ್ಣವರು ಇದ್ದಾಗ ಗಾಂಧೀಜಿ ಸೇರಿದಂತೆ ಎಲ್ಲರು ಬರುತ್ತಿದ್ದರು. ಹಾಗಾಗಿ, ಇಂದಿರಾಗಾಂಧಿ ಬಾಲ್ಯದಿಂದಲೇ ಜನಪರ ಧೋರಣೆ ಹೊಂದಿದ್ದರು ಎಂದು ಸ್ಮರಿಸಿದ್ದಾರೆ.

ಕಾಂಗ್ರೆಸ್ ನಾಯಕರು ತ್ಯಾಗ ಬಲಿದಾನ ಮಾಡಿದ್ದಾರೆ‌‌

ಇಂದಿರಾ ಗಾಂಧಿಯವರು ದೇಶಕ್ಕಾಗಿ ಬಹಳ ದೃಢವಾದ ನಿರ್ಧಾರ ತೆಗೆದುಕೊಳ್ಳುತ್ತಿದ್ದರು. ಆದ್ದರಿಂದಲೇ ಅವರನ್ನು ಉಕ್ಕಿನ ಮಹಿಳೆ ಎಂದು ಕರೆಯುತ್ತಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ನಾಯಕರು ತ್ಯಾಗ ಬಲಿದಾನ ಮಾಡಿದ್ದಾರೆ‌‌. ಬಿಜೆಪಿಯವರು ಒಬ್ಬರು ಸಹ ಮಾಡಿಲ್ಲ. ಸಮ ಸಮಾಜದ ನಿರ್ಮಾಣ ಮಾಡುವುದು ಕಾಂಗ್ರೆಸ್. ಇಂದಿರಾಗಾಂಧಿ ಹಠಾವೋ ಎಂದು ವಿಪಕ್ಷ ದವರು ಎನ್ನುತ್ತಿದ್ದರು. ಆದರೆ, ಇಂದಿರಾಗಾಂಧಿ ಗರೀಭಿ ಹಠಾವೋ ಎನ್ನುತ್ತಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಸೇದಂತೆರಿ ಹಲವು ಮುಖಂಡರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES