ಚಿಕ್ಕಮಗಳೂರು: ರಾಜ್ಯದಲ್ಲಿ ಜನ ನೆಮ್ಮದಿಯಿಂದ ಬದುಕುವುದು ಕಷ್ಟವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಯಲ್ಲಿ ಮಾತನಾಡಿದ ಗ್ಯಾರಂಟಿಗಳಿಂದ ಜನ ನೆಮ್ಮದಿಯಿಂದ ಇದ್ದಾರೆಂದು ಜಾಹೀರಾತು ಪ್ರಕಟಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ಜಾಹೀರಾತು ಪ್ರಕಟಿಸಿದ್ದೀರಿ. ಜನ ನೆಮ್ಮದಿಯಿಂದ ಇದ್ದಾರಾ ಇಲ್ಲ ಅಂತ ಜಾಹೀರಾತನಿಂದ ತಿಳಿಯಲ್ಲ ಎಂದರು.
ಇದನ್ನೂ ಓದಿ: ಹಿಂದುತ್ವ ಎಂದರೆ ದಲಿತರನ್ನು ಹೊರಗಿಡುವ ಜಾತಿತ್ವ : ಸಚಿವ ಡಾ. ಹೆಚ್.ಸಿ. ಮಹದೇವಪ್ಪ
ರಾಜ್ಯದಲ್ಲಿ ಅಕ್ರಮಗಳು, ಅಪರಾಧ ಚಟುವಟಿಗಳು ಹೆಚ್ಚುತ್ತಿವೆ. ರಾಜ್ಯದಲ್ಲಿ ಜನ ನೆಮ್ಮದಿಯಿಂದ ಬದುಕುವುದು ಕಷ್ಟಕರವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ಧಾರೆ.