ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ವಿಶ್ವಕಪ್ ಪೈನಲ್ ಪಂದ್ಯವನ್ನು ವೀಕ್ಷಿಸಿದರು.
ವಿಶ್ವಕಪ್-2023 ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಹೆಚ್.ಡಿ ದೇವೇಗೌಡ ಅವರು ತಮ್ಮ ನಿವಾಸದಲ್ಲಿ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸುತ್ತಿದ್ದಾರೆ.
ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 50 ಓವರ್ಗಳಲ್ಲಿ 240 ರನ್ ಗಳಿಸಿದೆ. 241 ರನ್ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿರುವ ಆಸ್ಟ್ರೇಲಿಯಾ ತಂಡ 3 ವಿಕೆಟ್ ಕಳೆದುಕೊಂಡು 87 ರನ್ ಗಳಿಸಿದೆ. ಭಾರತದ ಪರ ಜಸ್ಪ್ರೀತ್ ಬುಮ್ರಾ 2 ಹಾಗೂ ಮೊಹಮ್ಮದ್ ಶಮಿ ಒಂದು ವಿಕೆಟ್ ಪಡೆದಿದ್ದಾರೆ. ಸದ್ಯ ಟ್ರಾವಿಸ್ ಹೆಡ್ 27 ಹಾಗೂ ಮಾರ್ನಸ್ ಲಬುಶಂಗೆ 8 ರನ್ ಗಳಿಸಿ ಕ್ರೀಸ್ನಲ್ಲಿದ್ದಾರೆ.
ಭಾರತದ ಗೆಲುವಿಗೆ ಪ್ರಾರ್ಥನೆ
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಎಲ್ಲಾ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಭಾರತ ಸೇರಿದಂತೆ ಮೊದಲ 2 ಪಂದ್ಯಗಳನ್ನು ಸೋತ ಆಸ್ಟ್ರೇಲಿಯಾ, ಸತತ 8 ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿಸಿದೆ. ಇಂದಿನ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಕೋಟ್ಯಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.