ಬೆಂಗಳೂರು: ಜಿಕೆವಿಕೆಯಲ್ಲಿ ನಡೆಯುತ್ತಿರುವ 4 ದಿನಗಳ ಕೃಷಿ ಮೇಳಕ್ಕೆ ಇಂದು ತೆರೆ ಬೀಳಲಿದೆ. ಮಧ್ಯಾಹ್ನ 2 ಗಂಟೆಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೈತರಿಗೆ ಪ್ರಶಸ್ತಿ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ತೆರೆ ಬೀಳಲಿದೆ.
ಕೃಷಿ ಮೇಳದ ಮೂರನೇ ದಿನವಾದ ಭಾನುವಾರ ಒಟ್ಟಾರೆ ಸುಮಾರು 1.65 ಕೋಟಿಗೂ ಅಧಿಕ ವಹಿವಾಟು ನಡೆಯಿತು. ನಿನ್ನೆ ಒಂದೇ ದಿನ 5.10 ಲಕ್ಷ ಜನರು ಮೇಳಕ್ಕೆ ಭೇಟಿ ನೀಡಿದ್ದರು. ಕೃಷಿ ವಿವಿಯ ರಿಯಾಯಿತಿ ದರದ ಮುದ್ದೆ ಊಟವನ್ನು 9 ಸಾವಿರದ 350 ಜನರು ಸವಿದರು. ಭಾನುವಾರ ಜನ ಸಾಗರವೇ ಹರಿದು ಬಂದಿದ್ದು, ಹೂವು-ಹಣ್ಣಿನ ಸಸಿಗಳ ಖರೀದಿ ಭರ್ಜರಿಯಾಗಿತ್ತು.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ: ಹಣ ಬಾರದವರಿಗೆ ಸಿಹಿಸುದ್ದಿ!
ಇಂದು ಕೊನೆಯ ದಿನ ಆಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುವ ಸಾಧ್ಯತೆಯಿದೆ. ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರಾಜ್ಯಪಾಲ ಗೆಹಲೋತ್ ಪಾಲ್ಗೊಳ್ಳುವ ಸಾಧ್ಯತೆಯಿದೆ.