ಅಹಮದಾಬಾದ್: ಭಾನುವಾರ ನಡೆದ ವಿಶ್ವಕಪ್ 2023 ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಮಣಿಸಿ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಈ ನಡುವೆ ಆಸ್ಟ್ರೇಲಿಯಾ ತಂಡದ ಆಟಗಾರ ವಿಶ್ವಕಪ್ ಟ್ರೋಫಿಗೆ ಭಾರಿ ಅವಮಾನ ಮಾಡಿರುವ ಆರೋಪ ಎಲ್ಲೆಡೆ ಕೇಳಿ ಬಂದಿದೆ.
ಆಸ್ಟ್ರೇಲಿಯಾ 6ನೇ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಆದರೆ ಇದೀಗ ತಂಡದ ಆಟಗಾರ ಮಿಚೆಲ್ ಮಾರ್ಷ್ ಅವರು ಟ್ರೋಫಿ ಗೆದ್ದ ಬಳಿಕ ತೋರಿದ ವರ್ತನೆಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿದೆ. ಡ್ರೆಸ್ಸಿಂಗ್ ರೂಮ್ನಲ್ಲಿ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕ್ರಿಕೆಟ್ ಪ್ರೇಮಿಗಳಿಂದ ಟೀಕೆಗೆ ಗುರಿಯಾಗಿದ್ದಾರೆ.
ಇದನ್ನೂ ಓದಿ: ಪೋಕ್ಸೋ ಪ್ರಕರಣ: ಮುಗುಘಾ ಮಠದ ಶಿವಮೂರ್ತಿ ಮತ್ತೆ ಅರೆಸ್ಟ್!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವಕಪ್ ಗೆದ್ದಿತು. ಆಸ್ಟ್ರೇಲಿಯಾ ತಂಡದ ಸಂಭ್ರಮದ ಹಲವು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದರ ನಡುವೆ ಮಿಚೆಲ್ ಮಾರ್ಷ್ ಅವರು ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಫೋಟೊ ಎಲ್ಲಡೆ ವೈರಲ್ ಆಗಿದೆ.
World Cup ko Bhagwan ke paas liye jata hai Yanha 😌🥺
Aur Wanha Foot Rest Ke liye Use Kia jata hai 👏👏👍SHAME ON AUSTRALIA#ICCCricketWorldCup23 #ICCCricketWorldCup pic.twitter.com/1KiJXUHQ2w
— Dhriti🌷 (@Dh_r_iti) November 20, 2023