ಬೆಂಗಳೂರು : ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್-2023 ಫೈನಲ್ ಪಂದ್ಯದ ಸೋಲಿನ ಬಳಿಕ ಭಾವುಕರಾದ ಭಾರತದ ಸ್ಟಾರ್ ವೇಗಿ ಮೊಹಮ್ಮದ್ ಶಮಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನ ಹೇಳಿದ್ದಾರೆ.
ಬಳಿಕ, ಶಮಿ ಎಕ್ಸ್ನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ‘ನಿನ್ನೆ ನಮ್ಮ ದಿನವಾಗಿರಲಿಲ್ಲ, ನಾವು ಬಲವಾಗಿ ಹಿಂತಿರುಗುತ್ತೇವೆ’ ಎಂದು ಮತ್ತೆ ಪುಟಿದೇಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
‘ದುರಾದೃಷ್ಟವಶಾತ್ ನಿನ್ನೆ ನಮ್ಮ ದಿನವಾಗಿರಲಿಲ್ಲ. ವಿಶ್ವಕಪ್-2023 ಟೂರ್ನಿಯುದ್ದಕ್ಕೂ ನನ್ನನ್ನು ಹಾಗೂ ನಮ್ಮ ತಂಡವನ್ನು ಬೆಂಬಲಿಸಿದ ಎಲ್ಲಾ ಭಾರತೀಯರಿಗೆ ಧನ್ಯವಾದಗಳು. ಡ್ರೆಸ್ಸಿಂಗ್ ರೂಂಗೆ ಬಂದು ನಮಗೆ ಸ್ಫೂರ್ತಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಧನ್ಯವಾದಗಳು. ನಾವು ಬಲವಾಗಿ ಹಿಂತಿರುಗುತ್ತೇವೆ’ ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ವಿಶ್ವಕಪ್ನಲ್ಲಿ ಬೊಂಬಾಟ್ ಪ್ರದರ್ಶನ
ವಿಶ್ವಕಪ್-203 ಟೂರ್ನಿಯಲ್ಲಿ 7 ಪಂದ್ಯ ಆಡಿರುವ ಮೊಹಮ್ಮದ್ ಶಮಿ 24 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ನ್ಯೂಜಿಲೆಂಡ್ ವಿರುದ್ಧ 5, ಇಂಗ್ಲೆಂಡ್ ವಿರುದ್ಧ 4, ಶ್ರೀಲಂಕಾ ವಿರುದ್ಧ 5, ದಕ್ಷಿಣ ಆಫ್ರಿಕಾ ವಿರುದ್ಧ 2, ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಒಂದು ವಿಕೆಟ್ ಪಡೆದಿದ್ದಾರೆ.
Unfortunately yesterday was not our day. I would like to thank all Indians for supporting our team and me throughout the tournament. Thankful to PM @narendramodi for specially coming to the dressing room and raising our spirits. We will bounce back! pic.twitter.com/Aev27mzni5
— 𝕸𝖔𝖍𝖆𝖒𝖒𝖆𝖉 𝖘𝖍𝖆𝖒𝖎 (@MdShami11) November 20, 2023