Tuesday, November 5, 2024

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಹೈಕೋರ್ಟ್ ದ್ವಿಸದಸ್ಯ ಪೀಠದಲ್ಲಿ ಡಿಕೆಶಿ ಮೇಲ್ಮನವಿ ವಿಚಾರಣೆ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನೆಲೆಯಲ್ಲಿ ಇಂದು ಹೈ ಕೋರ್ಟ್​ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರ ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಅನುಮತಿಯನ್ನು ಹೈ ಕೋರ್ಟ್ ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು. ಹಾಗಾಗಿ ಡಿ.ಕೆ.ಶಿವಕುಮಾರ್ ದ್ವಿಸದಸ್ಯ ಪೀಠಕ್ಕೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಅದನ್ನು ಪರಿಗಣಿಸಿ, ಹೈ ಕೋರ್ಟ್​ ದ್ವಿಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಅದನ್ನು ಪ್ರಶ್ನಿಸಿ, ಸಿಬಿಐ ಸುಪ್ರಿಂಕೋರ್ಟ್​ ಮೆಟ್ಟಿಲೇರಿತ್ತು. ಈ ಪ್ರಕರಣವನ್ನು ಹೈ ಕೋರ್ಟ್​ ನಕ್ಕೇ ಇತ್ಯರ್ಥ ಪಡಿಸಿಕೊಳ್ಳುವಂತೆ ಸೂಚಿಸಿದ ಸುಪ್ರಿಂಕೋರ್ಟ್​ 2 ವಾರಗಳ ಗಡುವು ನೀಡಿತ್ತು.

ಇದನ್ನೂ ಓದಿ: ಪೊಲೀಸ್‌ ‘112’ ವಾಹನವನ್ನೇ ಚಲಾಯಿಸಿಕೊಂಡು ಪರಾರಿಯಾದ ಆರೋಪಿ 

ಹಾಗಾಗಿ ಇಂದು ಹೈ ಕೋರ್ಟ್​ ನ ದ್ವಿ ಸದಸ್ಯ ಪೀಠದಲ್ಲಿ ಮತ್ತೆ ಅರ್ಜಿಯ ವಿಚಾರಣೆ ನಡೆಯಲಿದೆ. ದ್ವಿ ಸದಸ್ಯ ಪೀಠವು ಅರ್ಜಿಯನ್ನು ವಜಾ ಮಾಡಿದರೆ, ಡಿ.ಕೆ.ಶಿವಕುಮಾರ್ ಗೆ ಸಂಕಷ್ಟ ತಪ್ಪಿದ್ದಲ್ಲ ಎನ್ನಲಾಗುತ್ತಿದೆ

RELATED ARTICLES

Related Articles

TRENDING ARTICLES