Sunday, September 29, 2024

ಜಾತಿಗಣತಿ ವಿಚಾರ ನಮ್ಮ ಪಕ್ಷದ ನಿಲುವಿಗೆ ನಾವು ಬದ್ದ: ಡಿಕೆಶಿ

ಬೆಂಗಳೂರು: ಜಾತಿಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು, ಎಂದು ಅನೇಕ ಸಮುದಾಯಗಳು ಆಗ್ರಹ ಮಾಡಿವೆ. ಪರಿಶಿಷ್ಟರು, ಪಂಚಮಸಾಲಿ, ವೀರಶೈವರು, ಒಕ್ಕಲಿಗರು ಸೇರಿದಂತೆ ಹಲವರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ ಪಕ್ಷಬೇಧ ಮರೆತು ಹೋರಾಟ ಮಾಡಲಾಗುತ್ತಿದೆ.

ಇದನ್ನೂ ಓದಿ: ನಟಿ ತ್ರಿಷಾ ಕುರಿತ ಹೇಳಿಕೆ: ಮನ್ಸೂರ್ ಅಲಿ ಖಾನ್ ವಿರುದ್ಧ ಕೇಸ್ ದಾಖಲು!

ಆದರೇ, ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ ಎಂದು ತಿಳಿಸಿದರು.

ನೀವು ಕೂಡ ಪತ್ರಕ್ಕೆ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದೀರಾ ಎಂದು ಕೇಳಿದ ಪ್ರಶ್ನೆಗೆ, “ನಾನು ಸಹಿ ಮಾಡಬಾರದೇ? ಎಷ್ಟು ಜನ ಮಂತ್ರಿಗಳು ಈ ವಿಚಾರವಾಗಿ ಸಭೆ ಮಾಡಿಲ್ಲ? ಅದೇ ರೀತಿ ನಾನು ರಾಜಕೀಯ ಪಕ್ಕಕ್ಕಿಟ್ಟು ನಮ್ಮ ಸಮಾಜ, ಅದರ ಗೌರವ, ಅಭಿಮಾನ ಉಳಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದೇನೆ. ಇದು ಎಲ್ಲಾ ನಾಯಕರಲ್ಲೂ ಇರುತ್ತದೆ‌ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES