Sunday, November 24, 2024

ಕೆಇಎ ಪರೀಕ್ಷೆಯಲ್ಲಿನ ಅಕ್ರಮ : ಮತ್ತೆ 8 ದಿನ ಸಿಐಡಿ ಕಸ್ಟಡಿಗೆ ಆರ್. ಡಿ .ಪಾಟೀಲ್

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ FDA ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಆರ್​.ಡಿ.ಪಾಟೀಲ್​ನನ್ನು ಮತ್ತೆ 8 ದಿನ ಕಸ್ಟಡಿಗೆ ಪಡೆದಿದ್ದಾರೆ.

KEA ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್​.ಡಿ.ಪಾಟೀಲ್​ನ ಹೆಚ್ಚಿನ ವಿಚಾರಣೆಗೆ ವಶಕ್ಕೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಕಲಬುರಗಿ JMFC ಕೋರ್ಟ್ ಮನವಿ ಪುರಸ್ಕರಿಸಿ CID ವಶಕ್ಕೆ ನೀಡಿದೆ.

ಕಳೆದ ಅ.28ರಂದು ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಮುಖ ಆರೋಪಿ ಅಫಜಲಪುರದ ಆರ್.ಡಿ.ಪಾಟೀಲ್ ಪೊಲೀಸ್ ಕಸ್ಟಡಿಯ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಕಲಬುರಗಿ ಪ್ರಧಾನ ಜೆಎಂಎಫ್‌ಸಿ ಕೋರ್ಟ್ ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದನ್ನೂ ಓದಿ: ಅರಮನೆ ಮೈದಾನದಲ್ಲಿ ಇಂದು, ನಾಳೆ ಐತಿಹಾಸಿಕ ಕಂಬಳ ಕಲರವ 

ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿಗೆ ಹಸ್ತಾಂತರಿಸಿತ್ತು. ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ ತನಿಖೆಗಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಮಾಹಿತಿ ಸಂಗ್ರಹಿಸಿದ ಬಳಿಕ ಆರ್.ಡಿ. ಪಾಟೀಲ್ ನನ್ನು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ನ್ಯಾಯಾಧೀಶ ಸಂತೋಷ ಶ್ರೀವಾಸ್ತವ ಅವರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಇದುವರೆಗೆ ಕಲಬುರಗಿಯ ಅಶೋಕ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದರು.

ವಿಶ್ವವಿದ್ಯಾಲಯ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಮತ್ತೆ ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

 

RELATED ARTICLES

Related Articles

TRENDING ARTICLES