ಬೆಂಗಳೂರು: ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಯಾರೇ ತಪ್ಪು ‘ಮಾಡಿದರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಅದರ ಬಗ್ಗೆ ಒಂದು ಸಭೆ ಮಾಡಿ ಸೂಕ್ತ ಕ್ರಮದ ನಿರ್ಣಯ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ತೆಲಂಗಾಣದಲ್ಲಿ ಇಂದು ನಮ್ಮ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ. ನಮಗೆ ಮಾಹಿತಿ ಇರುವ ಪ್ರಕಾರ ಅಲ್ಲಿ ಶೇ 100ಕ್ಕೆ 100 ರಷ್ಟು ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಒಂದು ತಂಡ ಸಿಎಂ ಸ್ಥಾನದಿಂದ ಇಳಿಸಲು ಹೊರಟಿದೆ ಎಂಬ ಬಿಜೆಪಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಪಾಪ ಅವರು ಈಗ ವಿಪಕ್ಷ ನಾಯಕರು. ಏನೇನೋ ಮಾತನಾಡ್ತಾರೆ, ಮಾತನಾಡಲಿ ಎಂದರು.
ಇದನ್ನೂ ಓದಿ: ಗ್ಯಾರಂಟಿ ಯೋಜನೆಗೆ ಹಣ ಕೊಟ್ಟು ಸಿದ್ದು ಸರ್ಕಾರ ಪಾಪರ್ ಆಗಿದೆ: ಆರ್. ಅಶೋಕ್
ಜಾತಿ ಗಣತಿ ಕುರಿತು ಶಾಮನೂರು ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ, ಅದರ ಬಗ್ಗೆ ಆಮೇಲೆ ಮಾತನಾಡುತ್ತೇನೆ ಎಂದಷ್ಟೇ ತಿಳಿಸಿದರು.