ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನ ತಮ್ಮ ಮನ್ ಕೀ ಬಾತ್ (ಬಾನುಲಿ) ಕಾರ್ಯಕ್ರಮದಲ್ಲಿ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ.
ಇತ್ತೀಚೆಗೆ ವಿದೇಶಕ್ಕೆ ಹೋಗಿ ಮದುವೆಯಾಗುವ ಪ್ರವೃತ್ತಿ ಹಲವು ಶ್ರೀಮಂತ ಕುಟುಂಬಗಳಲ್ಲಿ ಹೆಚ್ಚಾಗಿ ಪ್ರಾರಂಭವಾಗಿದೆ. ಇದು ಅಗತ್ಯವೇ ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.
ಭಾರತದಲ್ಲೇ ಮದುವೆ ಸಮಾರಂಭಗಳನ್ನು ಆಯೋಜಿಸುವಂತೆ ಮನವಿ ಮಾಡಿದ್ದಾರೆ. ಇದರಿಂದ ದೇಶದ ಹಣವು ನಮ್ಮಲ್ಲೇ ಉಳಿಯುತ್ತದೆ ಹಾಗೂ ಜನರಿಗೆ ಸೇವೆ ಮಾಡಲು ಅವಕಾಶ ಸಿಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಹುತಾತ್ಮರಾದ ಎಲ್ಲರಿಗೂ ಶ್ರದ್ಧಾಂಜಲಿ
ಇಂದು, ನವೆಂಬರ್ 26, ನಾವು ಎಂದಿಗೂ ಮರೆಯುವಂತಿಲ್ಲ. ಭಯೋತ್ಪಾದಕರು ಮುಂಬೈ ಮತ್ತು ಇಡೀ ದೇಶವನ್ನು ಭಯಭೀತಗೊಳಿಸಿದ್ದರು. ಆದರೆ, ನಾವು ಆ ದಾಳಿಯಿಂದ ಚೇತರಿಸಿಕೊಂಡಿದ್ದೇವೆ ಮತ್ತು ಈಗ ಪೂರ್ಣ ಧೈರ್ಯದಿಂದ ಭಯೋತ್ಪಾದನೆಯನ್ನು ಹತ್ತಿಕ್ಕುತ್ತಿದ್ದೇವೆ. ಇದು ಭಾರತದ ಶಕ್ತಿ. ಮುಂಬೈ ದಾಳಿಯಲ್ಲಿ ಹುತಾತ್ಮರಾದ ಎಲ್ಲರಿಗೂ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.