Friday, November 1, 2024

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮೋದಿ!

ತಿರುಪತಿ: 3 ದಿನಗಳ ಕಾಲ ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ತಿರುಪತಿಗೆ ಭೇಟಿ ನೀಡಿದ್ದು, ಅಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಭಾನುವಾರ ಸಂಜೆ ತಿರುಪತಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 8 ಗಂಟೆಗೆ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗ್ಗೆ 8 ರಿಂದ 8.45 ರವರೆಗೆ ದೇವಾಲಯದೊಳಗೆ ಇದ್ದ ಮೋದಿ ವೆಂಕಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಮಹಿಳೆಯರ ಸುರಕ್ಷತೆಗೆ ಪ್ಯಾನಿಕ್ ಬಟನ್ ಅಳವಡಿಕೆ

ತಿರುಪತಿಗೆ ಆಗಮಿಸಿದ ಪ್ರಧಾನಿಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸ್ವಾಗತ ಕೋರಿದ್ದಾರೆ. ತಿರುಮಲಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭಕ್ತಾದಿಗಳಿಗೆ ವಿಐಪಿ ದರ್ಶನ ರದ್ದುಗೊಳಿಸಲಾಗಿದೆ ಎಂದು ಟಿಟಿಡಿ ತಿಳಿಸಿದೆ. ತಿರುಪತಿ ಮತ್ತು ತಿರುಮಲದಲ್ಲಿ ಭದ್ರತೆಯನ್ನು ತೀವ್ರ ಬಿಗಿಗೊಳಸಲಾಗಿದೆ. ತಿರುಪತಿಯಲ್ಲಿ ವೆಂಕಟೇಶ್ವರನ ದರ್ಶನದ ಬಳಿಕ ಪ್ರಧಾನಿ ತೆಲಂಗಾಣ ಸಾರ್ವತ್ರಿಕಾ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಲವು ಸಮಾವೇಶ ಹಾಗೂ ರೋಶ್‌ ಶೋಗಳಲ್ಲಿ ಭಾಗವಹಿಸಲಿದ್ದಾರೆ.

ಪಂಚ ರಾಜ್ಯಗಳ ಚುನಾವಣೆ ಪೈಕಿ ತೆಲಂಗಾಣ ರಾಜ್ಯದ ಚುನಾವಣೆ ಕೊನೆಯದಾಗಿದ್ದು, ಮಧ್ಯಪ್ರದೇಶ, ರಾಜಸ್ಥಾನ ಬಳಿಕ ಇದೀಗ ಕೇಸರಿ ಪಡೆ ತೆಲಂಗಾಣದತ್ತ ಗಮನಹರಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಹೈದರಾಬಾದ್ ನಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಸಂಜೆ 5.30 ರಿಂದ 7 ರ ವರೆಗೆ ಹೈದರಾಬಾದ್‌ನಲ್ಲಿ ರೋಡ್ ಶೋ ನಡೆಸಲಿರುವ ಪ್ರಧಾನಿ ಕಮಲ ಪಾಳಯದ ಗೆಲುವಿಗೆ ಜನರಿಗೆ ಮನವಿ ಮಾಡಲಿದ್ದಾರೆ.

RELATED ARTICLES

Related Articles

TRENDING ARTICLES