Friday, November 22, 2024

ಹಾಸ್ಟೆಲ್‌ನಲ್ಲಿ ಚಿತ್ರಾನ್ನ ತಿಂದ 23 ವಿದ್ಯಾರ್ಥಿಗಳು ಅಸ್ವಸ್ಥ

ದಾವಣಗೆರೆ: ಬೆಳಗ್ಗೆ ಚಿತ್ರಾತ್ನ ಸೇವಿಸಿ ಹಾಸ್ಟೆಲ್​ ಮಕ್ಕಳು ಅಸ್ವಸ್ಥಗೊಂಡಿರು ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. 

23 ವಿದ್ಯಾರ್ಥಿಗಳು ಅಸ್ಪಸ್ಥರಾಗಿದ್ದು,ಈ ಪೈಕಿ 8 ಜನರ ಸ್ಥಿತಿ ಚಿಂತಾಜನಕವಾಗಿದೆ.ಅಸ್ವಸ್ಥ ಮಕ್ಕಳನ್ನು ದಾವಣಗೆರೆ ಜಿಲ್ಲಾಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಿಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

23 ವಿದ್ಯಾರ್ಥಿನಿಯರು ಅಸ್ವಸ್ಥ

ಚನ್ನಗಿರಿಯ ಕಾಕನೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಮಕ್ಕಳು ಅಸ್ವಸ್ಥಗೊಂಡಿರೋ ಘಟನೆ ನಡೆದಿದೆ. ಅಸ್ವಸ್ಥರ ಸಂಖ್ಯೆ 23ಕ್ಕೆ ಏರಿಕೆಯಾಗಿದ್ದು, ಈ ಪೈಕಿ 8 ಜನರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದೆ.

ಹೊಟ್ಟೆ ನೋವಿನಿಂದ ಮಕ್ಕಳ ಒದ್ದಾಟ

ಬೆಳಗ್ಗೆ ಹಾಸ್ಟೆಲ್‌ನಲ್ಲಿ ಚಿತ್ರಾನ್ನ ತಿಂದ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದರು. ಸದ್ಯ ಹೊಟ್ಟೆ ನೋವಿನಿಂದ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳು ಒದ್ದಾಡುತ್ತಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ ಅಂತ್ಯದವರೆಗೆ ಗೃಹಲಕ್ಷ್ಮಿ ಹಣ ಕೊಡುತ್ತೇವೆ : ಸಿದ್ದರಾಮಯ್ಯ ಸ್ಪಷ್ಟನೆ

ವಿವಿಧ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಚಿಕಿತ್ಸೆ

ಇನ್ನು ಅಸ್ವಸ್ಥ ಮಕ್ಕಳನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ. 8 ಮಕ್ಕಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಉಳಿದ ಮಕ್ಕಳಿಗೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

RELATED ARTICLES

Related Articles

TRENDING ARTICLES