ಬೆಳಗಾವಿ : ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿಗಮ ಮಂಡಳಿ ಅಧ್ಯಕ್ಷರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು ಎಂದು ತಿಳಿಸಿದರು.
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? : ನನಗೆ ಕೊಡಬಾರದ ನೋವು, ಹಿಂಸೆ ಕೊಟ್ಟಿದ್ದಾರೆ : ಡಿ.ಕೆ. ಶಿವಕುಮಾರ್
ನನಗೆ ಕಾನೂನಿನ ಅರಿವು ಇಲ್ಲದಿದ್ರೆ..!
ನಾನು ವಕೀಲನಾಗಿರುವುದರಿಂದಲೇ ಹಿಂದಿನ ತನಿಖಾ ಆದೇಶ ಕಾನೂನು ರೀತ್ಯವಿರಲಿಲ್ಲವೆಂದು ವಾಪಸ್ಸು ಪಡೆಯಲಾಗಿದೆ. ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಹೆಚ್.ಡಿ. ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಗೆ ಸಮ್ಮತಿಸುತ್ತಿದ್ದೆ ಎಂದು ತಿರುಗೇಟು ನೀಡಿದ್ದಾರೆ.