ಮೈಸೂರು: ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮಾತಾ ಆಸ್ಪತ್ರೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.
ಕಳೆದ 4 ತಿಂಗಳಿಂದ ಮಾತಾ ಆಸ್ಪತ್ರೆ ವಿದ್ಯುತ್ ಬಿಲ್ ಪಾವತಿಸಿರಲಿಲ್ಲ. ಬರೋಬ್ಬರಿ 20 ಸಾವಿರ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಚೆಸ್ಕಾಂ ಸಿಬ್ಬಂದಿ ಮಾತಾ ಆಸ್ಪತ್ರೆ ಕರೆಂಟ್ ಕಟ್ ಮಾಡಿದೆ. ಮಂಡ್ಯದ ಆಲೆಮನೆಯಲ್ಲಿ ಗರ್ಭದ ಸ್ಕ್ಯಾನಿಂಗ್ ಮಾಡಿ ಲಿಂಗ ಪತ್ತೆ ಮಾಡುತ್ತಿದ್ದ ಕಿರಾತಕರು, ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದರು. ಇದು ದೊಡ್ಡ ಮಟ್ಟದಲ್ಲಿ ದಂಧೆಯಾಗಿದೆ.
ಇದನ್ನೂ ಓದಿ: ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇದೀಗ ಆಸ್ಪತ್ರೆ ವಿರುದ್ಧ ಹಲವು ದೂರುಗಳು ಕೇಳಿಬರುತ್ತಿದ್ದಂತೆಯೇ ಚೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿವಂತೆ ಸೂಚನೆ ನೀಡಿದ ಬೆನ್ನಲ್ಲೇ ಮಾತಾ ಆಸ್ಪತ್ರೆಗೆ ನೀಡಲಾಗಿದ್ದ ವಿದ್ಯುತ್ ಕಡಿತಗೊಳಿಸಲಾಗಿದೆ.