ಬೆಂಗಳೂರು: ನಾಳೆ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ತೆಲಂಗಾಣದಲ್ಲಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ ಅಲರ್ಟ್ ಆಗಿದೆ.
ತೆಲಂಗಾಣ ವಿಧಾನಸಭಾ ಫಲಿತಾಂಶಕ್ಕೂ ಮುನ್ನವೇ AICC ಕರ್ನಾಟಕ ನಾಯಕರನ್ನ ತೆಲಂಗಾಣದಲ್ಲಿ ನಿಯೋಜಿಸಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ಗೂ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೆಣುಗೋಪಾಲ್ ಸೂಚನೆ ನೀಡಿದ್ದಾರೆ. ಕೆ.ಸಿ.ವೇಣುಗೋಪಾಲ್ ಸೂಚನೆ ಹಿನ್ನೆಲೆ ಜಮೀರ್ ಅಹ್ಮದ್ ಖಾನ್ ತೆಲಂಗಾಣಕ್ಕೆ ತೆರಳಿದ್ದಾರೆ. ಜಮೀರ್ ಅಹ್ಮದ್ ಖಾನ್ ಹೈದ್ರಾಬಾದ್ ಸಿಟಿ ಸೇರಿದಂತೆ ತೆಲಂಗಾಣದ ಹಲವು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು. 20ಕ್ಕೂ ಹೆಚ್ಚು ದಿನ ಹೈದ್ರಾಬಾದ್ನಲ್ಲೇ ಠಿಕಾಣಿ ಹೂಡಿ ಮತ ಭೇಟೆಯಾಡಿದ್ದರು.
ಇದನ್ನೂ ಓದಿ: ಮಧು ಬಂಗಾರಪ್ಪ ಗೆ ಅಹಂ ಜಾಸ್ತಿ ಆಗಿದೆ: ಬೇಳೂರು ಗೋಪಾಲಕೃಷ್ಣ
ಜಮೀರ್ ತೆಲಂಗಾಣದಲ್ಲೂ ಸಾಕಷ್ಟು ಹಿಡಿತ ಸಾಧಿಸಿದ್ದಾರೆ. ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಕಾಂಗ್ರೆಸ್ ಶಾಸಕರನ್ನ ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ತಂತ್ರ ರೂಪಿಸಿದೆ. ಜೊತೆಗೆ ತಮ್ಮತಮ್ಮ ಸಂಪರ್ಕಕ್ಕೆ ಸಿಗುವ ಇತರ ಪಕ್ಷಗಳ ಗೆಲ್ಲುವವರನ್ನ ಸೆಳೆಯಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ.