ಬೆಂಗಳೂರು: ರಾಜ್ಯದಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಸೃಷ್ಟಿ, ಸೈಕ್ಲೋನ್ ಹಿನ್ನೆಲೆ ಆಂಧ್ರ ಪ್ರದೇಶ, ಒಡಿಶಾ, ತಮಿಳುನಾಡು ಮೂರು ರಾಜ್ಯಗಳಿಗೆ ಹವಾಮಾನ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಭೇಟಿ: ದೇವಿ ದರ್ಶನ ಪಡೆದ ರಾಹುಲ್ ದ್ರಾವಿಡ್ ದಂಪತಿ!
ಸದ್ಯ ಬಂಗಾಳಕೊಲ್ಲಿಯಲ್ಲಿ 18 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಈ ಚಂಡಮಾರುತಕ್ಕೆ ಮೈಚುಂಗ್ ಎಂದು ಹೆಸರಿಸಲಾಗಿದೆ. ಆಂಧ್ರದ ನೆಲ್ಲೂರು, ಮಚಲಿಪಟ್ಟಣದ ಕರಾವಳಿಗೆ ಅಪ್ಪಳಿಸಲಿರುವ ಮೈಚುಂಗ್ ಈ ಚಂಡಮಾರುತ ಗಂಟೆಗೆ 100 ಕಿಮೀ ವೇಗದಲ್ಲಿ ದಾಳಿ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಕರ್ನಾಟಕಕ್ಕೂ ಇದರ ಎಫೆಕ್ಟ್ ತಟ್ಟಲಿದೆ. ಈ ವೇಳೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಿದೆ.