Sunday, September 29, 2024

ತೆಲಂಗಾಣ ಕಾಂಗ್ರೆಸ್​ ಕಚೇರಿ ಮುಂದೆ ಕಾರ್ಯಕರ್ತರ ಸಂಭ್ರಮಾಚರಣೆ!

ಹೈದಾರಾಬಾದ್: ಇಂದು ತೆಲಂಗಾಣ ಸೇರಿದಂತೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಮತಎಣಿಕೆ ಕಾರ್ಯ ಅಂತಿಮ ಹಂತಕ್ಕೆ ಬಂದಿದ್ದು ತೆಲಂಗಾಣದಲ್ಲಿ ಇದೇ ಮೊದಲ ಬಾರಿಗೆ ಬಿಆರ್​ ಎಸ್​ ಪಕ್ಷದ ಬದಲಿಗೆ ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಏರಲು ಸಿದ್ದತೆ ಮಾಡಿಕೊಳ್ಳುತ್ತಿದೆ.

ಚುನಾವಣಾ ಆಯೋಗದ ಟ್ರೆಂಡ್ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್ 52 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈದರಾಬಾದ್‌ನಲ್ಲಿರುವ ಪಕ್ಷದ ಕಚೇರಿಯ ಹೊರಗೆ ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ತೆಲಂಗಾಣ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿದಿದ್ದು, ಪಕ್ಷವು ಈ ಕುರಿತು ವಿಶೇಷವಾಗಿ ಟ್ವೀಟ್ ಮಾಡಿದೆ.

ಇದನ್ನು ಓದಿ: ಮತ ಎಣಿಕೆ ಪ್ರಕ್ರಿಯೆಗೆ ಕ್ಷಣಗಣನೆ: ಇಂದು ನಾಲ್ಕು ವಿಧಾನಸಭಾ ಕ್ಷೇತ್ರಗಳ ಭವಿಷ್ಯ ನಿರ್ಧಾರ!

ಇಂದು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ರಾಜ್ಯಗಳ ಚುನಾವಣೆಯ ಮತಎಣಿಕೆ ಕಾರ್ಯ ನಡೆಯುತ್ತಿದೆ, ಈ ರಾಜ್ಯಗಳಲ್ಲಿ ಕಾಂಗ್ರೆಸ್​ ಮತ್ತು ಮತ್ತು ಬಿಜೆಪಿ ಗೆ ನೇರ ಹಣಾಹಣಿ ನಡೆಯುತ್ತಿದ್ದು ತೆಲಂಗಾಣ ಹೊರತುಪಡಿಸಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತಿಸ್​ಗಡ್​ ನಲ್ಲಿ ಬಿಜೆಪಿ ಮುಂಚೂಣಿಯನ್ನು ಸಾಧಿಸಿದೆ.

ಇನ್ನೂ, ಮಿಜೋರಾಂ ರಾಜ್ಯದ ಚುನಾವಣಾ ಮತದಾನಕ್ಕೆ ಸಂಬಂಧಿಸಿ ಡಿ. 4ರಂದು ಮತ ಎಣಿಕೆ ನಡೆಯಲಿದೆ.

RELATED ARTICLES

Related Articles

TRENDING ARTICLES