Thursday, December 19, 2024

‘ಅರ್ಜುನ’ ಆನೆಗೆ ಹಾಸನ, ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ

ಬೆಳಗಾವಿ : ಮದಗಜಗಳ ಕಾದಾಟದಲ್ಲಿ ಬಾರದ ಲೋಕದತ್ತ ಪಯಣ ಬೆಳೆಸಿರುವ ಅರ್ಜುನ ಆನೆಗೆ ಹಾಸನ ಹಾಗೂ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಬೆಳಗಾವಿ ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರ ಜೊತೆ ಚರ್ಚ ಮಾಡಿದ್ದೇನೆ. ರಾಜ್ಯ, ರಾಷ್ಟ್ರಕ್ಕೆ ಹೆಮ್ಮೆ ತಂದಂತಹ 8 ಬಾರಿ ದಸರಾ ಹಬ್ಬ ಯಶಸ್ಸಿಗೆ ಕಾರಣವಾದಂತಹ ಅರ್ಜುನ ಸ್ಮಾರಕ ನಿರ್ಮಾಣಕ್ಕೆ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

8 ಬಾರಿ ಅಂಬಾರಿ ಹೊತ್ತ ಅರ್ಜುನ ಸಾವಿಗೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಎಂದು ಈಗಲೇ ಹೇಳಲು ಆಗುವುದಿಲ್ಲ. ಇಂತಹ ಕಾರ್ಯಾಚರಣೆಗಳಲ್ಲಿ ಸುಮಾರು ಅರಣ್ಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಅಪಾಯ ಇದೆ ಎಂದು ತಿಳಿದು ಸಾರ್ವಜನಿಕರ ಆಸ್ತಿ, ಜೀವ ರಕ್ಷಣೆಗೆ ಸೇವೆ ಮಾಡುತ್ತಾರೆ. ಇಂಥ ಪರಿಸ್ಥಿತಿಯಲ್ಲಿ ಹೀಗೆ ಆಗಿದೆ ಎನ್ನುವುದಕ್ಕಿಂತ ಹೇಗೆ ಆಗಿದೆ ಎಂದು ಪರಿಶೀಲಿಸಲಾಗುವುದು. ಈಗಲೇ ಈ ಬಗ್ಗೆ ಹೇಳಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಅರ್ಜುನನ ಅಗಲಿಕೆ ರಾಜ್ಯಕ್ಕೆ ದುಃಖ ತಂದಿದೆ

ತನಿಖಾ ವರದಿ ಬಂದ ಮೇಲೆ ಲೋಪದೋಷಗಳಿದ್ದರೆ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ವಿಷಯಗಳ ಬಗ್ಗೆ ತನಿಖಾ ವರದಿ ಬರುತ್ತದೆ. ಪ್ರಜಾಪ್ರಭುತ್ವದಲ್ಲಿ ಲಾಠಿ ಚಾರ್ಜ್ ಆಗಬಾರದು. ಜನರು ಸಂಯಮ ಶಾಂತಿಯಿಂದ ಇರಬೇಕು. ಜನರು ಶಾಂತಿ ಕಾಪಾಡಬೇಕು. ಅರ್ಜುನನ ಅಗಲಿಕೆ ರಾಜ್ಯಕ್ಕೆ ದುಃಖ ತಂದಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಬೇಸರ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES