ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯಗಳಿಗೆ ಅನುದಾನದ ಕುರಿತಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾತಿನಲ್ಲಿ ಯಾವುದೇ ತಪ್ಪಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸುವ ರೀತಿಯ ಯಾವುದೇ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ನೀಡಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣಕ್ಕಾಗಿ 5 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಮುಂದಿನ ವರ್ಷಗಳಲ್ಲಿ ಈ ಮೊತ್ತವನ್ನು 10 ಸಾವಿರ ಕೋಟಿಗೆ ಹೆಚ್ಚಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಸಿಎಂ ಪರ ಬ್ಯಾಟ್ ಬೀಸಿದ್ದಾರೆ.
ನಾವು ಯಾರಿಗೂ ತಾರತಮ್ಯ ಮಾಡಲ್ಲ
ಎಸ್‌ಸಿ, ಎಸ್‌ಟಿ, ಹಿಂದುಳಿದ, ಅಲ್ಪಸಂಖ್ಯಾತ ಸೇರಿದಂತೆ ಎಲ್ಲಾ ಸಮುದಾಯಗಳಿಗೆ ದೇಶದ ಸಂಪತ್ತಿನ ಸಮಾನ ಹಂಚಿಕೆಯಾಗಬೇಕು. ನಮ್ಮ ಸರ್ಕಾರದ ಅವಧಿಯಲ್ಲಿ ಯಾರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಈ ಕುರಿತು ಇಂದು ಸದನದಲ್ಲಿ ನಮ್ಮ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅಲ್ಪಸಂಖ್ಯಾತ ಸಮುದಾಯಗಳಿಗೆ ಅನುದಾನದ ಕುರಿತಾದ ಮಾನ್ಯ ಮುಖ್ಯಮಂತ್ರಿಗಳ ಮಾತಿನಲ್ಲಿ ಯಾವುದೇ ತಪ್ಪಿಲ್ಲ. ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸುವ ರೀತಿಯ ಯಾವುದೇ ಹೇಳಿಕೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ @siddaramaiah ನೀಡಿಲ್ಲ.
ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣಕ್ಕಾಗಿ 5 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.… pic.twitter.com/n70wMjguft
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) December 6, 2023