ಬೆಂಗಳೂರು: ಮಿಚಾಂಗ್ ಚಂಡಮಾರುತ ಹಿನ್ನೆಲೆ ನೆರೆಯ ರಾಜ್ಯಗಳಾದ ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಹಲವೆಡೆ ಭಾರಿ ಅವಘಡಗಳು ಸಂಭವಿಸಿದ್ದು ಇದರಿಂದ ಅಲ್ಲಿನ ಸಾರ್ವಜನಿಕ ಆಸ್ತಿ ಪಾಸ್ತಿಗಳು ಅಲ್ಲದೇ ಜನರಿಗೂ ನಷ್ಟ ಉಂಟಾಗಿದೆ. ಈ ಹಿನ್ನೆಲೆ ಹವಾಮಾನ ಇಲಾಖೆಯೂ ರಾಜ್ಯದಲ್ಲಿ ಮಳೆಯ ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರಿನಲ್ಲಿ ಡಿಸೆಂಬರ್ 9 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ ಅಂದರ್!
ಈ ಪೈಕಿ, ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.