ದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಪ್ರಶ್ನೆಗಾಗಿ ಲಂಚ ಪಡೆದ ಪ್ರಕರಣದ ಕುರಿತು ಲೋಕಸಭೆಯಲ್ಲಿ ನೈತಿಕ ಸಮಿತಿ ವರದಿ ಮಂಡಿಸಿದ ಬೆನ್ನಲ್ಲೇ ಅವರನ್ನು ಉಚ್ಛಾಟನೆ ಮಾಡಲಾಗಿದೆ.
ಸಂಸದೆ ಮೊಯಿತ್ರಾ ಅವರನ್ನು ಉಚ್ಚಾಟಿಸುವಂತೆ ವರದಿಯಲ್ಲಿ ಶಿಫಾರಸು ಮಾಡಿದ್ದು, ಇದೇ ವರದಿಯನ್ನು ಲೋಕಸಭೆಯಲ್ಲಿ ಇಂದು ಮಂಡಿಸಲಾಗಿತ್ತು. ಅಂತೆಯೇ ಕೇಂದ್ರ ಸರ್ಕಾರ ಕೂಡ ಮಹುವಾ ಕುರಿತು ನೈತಿಕ ಸಮಿತಿ ವರದಿ ಶಿಫಾರಸನ್ನು ಬೆಂಬಲಿಸಿ ಇಂದು ಲೋಕಸಭೆಯಲ್ಲಿ ತನ್ನ ನಿರ್ಣಯ ಮಂಡಿಸಿತು.
ಇದನ್ನೂ ಓದಿ: ಅವರ ಬಗ್ಗೆ ಮಾತನಾಡುವಾಗ ಹುಷಾರ್: ಯತ್ನಾಳ್ಗೆ ರೇಣುಕಾಚಾರ್ಯ ಎಚ್ಚರಿಕೆ!
ಇದರ ಬೆನ್ನಲ್ಲೇ ಸ್ಪೀಕರ್ ಓಂ ಬಿರ್ಲಾ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ಅವರನ್ನು ಸಂಸತ್ತಿನಿಂದ ಉಚ್ಛಾಟಿಸಿದ್ದಾರೆ. ಇದೇ ವೇಳೆ ಸದನವನ್ನು ಡಿಸೆಂಬರ್ 11ಕ್ಕೆ ಮುಂದೂಡಿದ್ದಾರೆ.