ಬೆಂಗಳೂರು: ನಗರದ ವೈಟ್ಫೀಲ್ಡ್ನ ಕಾಡುಗೋಡಿಯಲ್ಲಿ ಪಾದಾಚಾರಿ ಮಾರ್ಗದಲ್ಲಿ ವಿದ್ಯುತ್ ತಂತಿ ತುಳಿದು ತಾಯಿ-ಮಗು ಮೃತಪಟ್ಟಿದ್ದ ಪ್ರಕರಣವನ್ನು ಲೋಕಾಯುಕ್ತ ತನಿಖೆ ನಡೆಸಿದ್ದು, ಮಹತ್ವದ ಅಂಶ ಬಯಲಾಗಿದೆ.
ವಿದ್ಯುತ್ ತಂತಿ ತುಂಡಾಗಲು “ಇಲಿ” ಕಾರಣ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧಿಕಾರಿಗಳು ಹೇಳಿದ್ದರು. ಆದರೆ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಲೋಕಾಯುಕ್ತ ವರದಿ ಹೇಳುತ್ತಿದೆ. ಹಾಗಾದರೆ ಬೆಸ್ಕಾಂ ಅಧಿಕಾರಿಗಳು ಹೇಳಿದ್ದು ಸುಳ್ಳೇ ಎಂಬ ಪ್ರಶ್ನೆ ಉದ್ಭವವಾಗಿದೆ.
ಇದನ್ನೂ ಓದಿ: TMC ಸಂಸದೆ ಮಹುವಾ ಮೊಹಿತ್ರಾ ಉಚ್ಛಾಟನೆ!
ಲೋಕಾಯುಕ್ತ ಎಸ್ಪಿ ಶ್ರೀನಾಥ್ ಮಹಾದೇವ ಜೋಷಿ ಅವರ ನೇತೃತ್ವದಲ್ಲಿ ತನಿಖೆ ನಡೆದಿದೆ. ಜೋಷಿ ಅವರು ಖುದ್ದು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಪೊಲೀಸರು ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿದ್ದು, ಇಂದು ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ವರದಿ ಸಲ್ಲಿಸಲಿದ್ದಾರೆ.